Bengaluru

ವಿರೋಧ ಪಕ್ಷಗಳಿಗೆ ಅಧಿವೇಶನದಲ್ಲಿ ಉತ್ತರ ನೀಡುವೆ-ಸಿಎಂ ಬೊಮ್ಮಾಯಿ

ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನದ ಮೊದಲ ದಿನವಾದ ಇಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಧಿವೇಶವನ್ನುದ್ದೇಶಿಸಿ ಮಾತನಾಡಿದ್ದಾರೆ ರಾಜ್ಯಪಾಲರ ಭಾಷಣದ ಕುರಿತಾಗಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿಯವರು ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ಕೋವಿಡ್ ಮತ್ತು ಪ್ರವಾಹ ನಿರ್ವಹಣೆ ಕುರಿತಂತೆ ಕೈಗೊಂಡಿರುವ ಕಾರ್ಯಕ್ರಮಗಳ ಸ್ಪಷ್ಟ ಚಿತ್ರಣವನ್ನು ರಾಜ್ಯಪಾಲರು ನೀಡಿದ್ದಾರೆ ಎಂದು ಮುಖ್ಯಮಂತ್ರಿ  ತಿಳಿಸಿದರು.

ವರ್ಷದ ಆರಂಭದಲ್ಲಿ ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡುತ್ತಾರೆ. ಕಳೆದ ಒಂದು ವರ್ಷದಲ್ಲಿ ಆಗಿರುವ ಕೋವಿಡ್ ಮತ್ತು ಪ್ರವಾಹ ನಿರ್ವಹಣೆ ಕುರಿತಂತೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಪ್ರಗತಿಯಾಗಿರುವ ಬಗ್ಗೆ ಸ್ಪಷ್ಟ ಚಿತ್ರಣ ನೀಡಿದ್ದಾರೆ. ಹಲವಾರು ಇಲಾಖೆಗಳ ಸಾಧನೆಯನ್ನೂ ಬಿಂಬಿಸುವುದಿದೆ ಎಂದರು.

ರಾಜ್ಯಪಾಲರ ಭಾಷಣದ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯನವರು ರಾಜ್ಯಪಾಲರಿಂದ ಸರ್ಕಾರ ಸುಳ್ಳು ಹೇಳಿಸಿದೆ ಎಂದು ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಸದನದಲ್ಲಿ ಉತ್ತರ ನೀಡುವಾಗ ಇನ್ನಷ್ಟು ಮಾಹಿತಿಯನ್ನು ನೀಡಲಾಗುವುದು. ವಿರೋಧ ಪಕ್ಷದವರಿಗೆ ಅಧಿವೇಶನದಲ್ಲಿಯೇ ಉತ್ತರ ನೀಡಲಾಗುವುದು. ಯಾವುದು ಸತ್ಯ ಯಾವುದು ಸುಳ್ಳು ಎನ್ನುವುದನ್ನು ಜನ ತೀರ್ಮಾನ ಮಾಡುತ್ತಾರೆ ಎಂದರು.

Share Post