ಸಿಎಂ ಸಿದ್ದರಾಮಯ್ಯ ಅವರಿಗೆ ಶೀತ, ಗಂಟಲು ನೋವು; ಇವತ್ತು ಫುಲ್ ರೆಸ್ಟ್
ಬೆಂಗಳೂರು; ಸಿಎಂ ಸಿದ್ದರಾಮಯ್ಯ ಅವರಿಗೆ ಶೀತ, ಗಂಟಲು ನೋವು ಬಂದಿದೆ. ಹೀಗಾಗಿ ಇಂದು ಅವರು ಯಾರನ್ನೂ ಭೇಟಿಯಾಗುತ್ತಿಲ್ಲ. ಮನೆಯಲ್ಲೇ ಉಳಿದಿರುವ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳನ್ನು ಕೂಡಾ ಭೇಟಿ ಮಾಡದೆ ರೆಸ್ಟ್ ಪಡೆಯುತ್ತಿದ್ದಾರೆ ಎಂದು ತಿಳಿದುವಂದಿದೆ.
ನಿನ್ನೆ ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಅವರು ಆಗಾಗ ಕೆಮ್ಮುತ್ತಿದ್ದರು. ಬಜೆಟ್ ಪ್ರತಿ ಓದಲು ಕೂಡಾ ಹೆಚ್ಚು ಸಮಯ ತೆಗೆದುಕೊಂಡಿದ್ದರು. ಮಳೆ ಹಿನ್ನೆಲೆಯಲ್ಲಿ ಅವರಿಗೆ ಶೀತ, ಗಂಟಲು ನೋವು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ವೈದ್ಯರು ಮನೆಯಲ್ಲೇ ಅವರಿಗೆ ಚಿಕಿತ್ಸೆ ನೀಡಿದ್ದು, ವಿಶ್ರಾಂತಿ ಪಡೆದುಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಇಂದಿನ ಬಹುತೇಕ ಕಾರ್ಯಕ್ರಮಗಳು ರದ್ದಾಗಲಿವೆ ಎಂದು ಹೇಳಲಾಗುತ್ತಿದೆ.