BengaluruNationalPolitics

ನಾಳೆ ಅಮಿತ್‌ ಶಾ, ರಾಷ್ಟ್ರಪತಿ ಭೇಟಿ ಮಾಡಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು; ಸಿಎಂ ಸಿದ್ದರಾಮಯ್ಯ ಅವರ ದೆಹಲಿ ಪ್ರಯಾಣದಲ್ಲಿ ಬದಲಾವಣೆ ಆಗಿದೆ. ಸಿದ್ದರಾಮಯ್ಯ ಅವರು ನಾಳೆ ಬೆಳೆಗ್ಗೆ 9.45ರ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ಮಧ್ಯಾಹ್ನದ ನಂತರ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ನಾಳೆ ಮಧ್ಯಾಹ್ನ 3 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಭೇಟಿಗೆ ಸಮಯ ನಿಗದಿಯಾಗಿದೆ. ಮೂರು ಗಂಟೆ ಸಿದ್ದರಾಮಯ್ಯ ಅವರು ಅಮಿತ್‌ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಅನಂತರ ಸಂಜೆ 5 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

Share Post