ಒಮಿಕ್ರಾನ್ ಭೀತಿ: ಸಿಎಂ ನೇತೃತ್ವದಲ್ಲಿ ಸಭೆ, ಅದಕ್ಕೂ ಮುನ್ನ ಸುಧಾಕರ್ ಚರ್ಚೆ
ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರು ಹಾಗೂ ಸಿಎಂ ಬೊಮ್ಮಾಯಿ ಮ್ಯಾರಥಾನ್ ಸಭೆಗಳನ್ನು ನಡೆಸುತ್ತಿದ್ದಾರೆ.
ಮೊದಲಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು, ಸರ್ಕಾರಿ ವೈದ್ಯ ಕಾಲೇಜುಗಳ ಅಧೀಕ್ಷಕರು, ಸರ್ಕಾರಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳು, ಡೀನ್‌ಗಳು, ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸುತ್ತಿದ್ದಾರೆ. ಸೋಂಕು ಹರಡದಂತೆ ಕ್ರಮ ಕೈಗೊಳ್ಳುವ ಬಗ್ಗೆ ಸುಧಾಕರ್ ಚರ್ಚೆ ನಡೆಸಿದ್ದಾರೆ.
ಇನ್ನೊಂದೆಡೆ ಸಿಎಂ ಬಸವರಾಜ ಬೊಮ್ಮಾಯಿ ಮಧ್ಯಾಹ್ನ 1 ಗಂಟೆಗೆ ಸಭೆ ಕರೆದಿದ್ದಾರೆ. ಆರೋಗ್ಯ ಸಚಿವರು ಹಾಗೂ ಆರೋಗ್ಯ ಇಲಾಖೆ ಉನ್ನತ ಅಧಿಕಾರಿಗಳು ಜೊತೆ ಸಿಎಂ ಸಭೆ ನಡೆಸಲಿದ್ದಾರೆ. ನಿನ್ನೆ ದೆಹಲಿಗೆ ಹೋಗಿದ್ದ ಸಿಎಂ ಬೊಮ್ಮಾಯಿ ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದಾರೆ.