ಉಕ್ರೇನ್‌ನಲ್ಲಿ ಹಾವೇರಿ ಮೂಲದ ವಿದ್ಯಾರ್ಥಿ ಸಾವು ದುರಂತದ ಸಂಗತಿ-ಸಿಎಂ ಟ್ವೀಟ್
ಬೆಂಗಳೂರು: ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧದಲ್ಲಿ ಕರ್ನಾಟಕ ಹಾವೇರಿ ಮೂಲದ ವಿದ್ಯಾರ್ಥಿ ನವೀನ್ ಮೃತಪಟ್ಟಿದ್ದಾರೆ. ಈ ಬಗ್ಗೆ ಸಿಎಂ ಟ್ವೀಟ್ ಮಾಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಉಕ್ರೇನ್ ನಲ್ಲಿ ಶೆಲ್ ಗಳ ದಾಳಿಗೆ ಕರ್ನಾಟಕದ ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತಪಟ್ಟಿದ್ದು ಒಂದು ದುರಂತದ ಸಂಗತಿ, ಈ ಕುರಿತು ನವೀನ್ ಅವರ ತಂದೆ ಶೇಖರಗೌಡ ಅವರಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ಸಾಂತ್ವನ ಹೇಳಿದ್ದೇನೆ. ನವೀನ ಅವರ ಮೃತದೇಹವನ್ನು ಭಾರತಕ್ಕೆ ತರಿಸಿಕೊಳ್ಳುವ ಎಲ್ಲ ಪ್ರಯತ್ನ ನಡೆಸಲಾಗುವುದು ಎಂದಿದ್ದಾರೆ.
ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದ್ದು, ಉಳಿದ ವಿಧ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ ಎಂಬ ಮಾಹಿತಿಯನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಉಕ್ರೇನ್ ನಲ್ಲಿ ಶೆಲ್ ಗಳ ದಾಳಿಗೆ ಕರ್ನಾಟಕದ ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತಪಟ್ಟಿದ್ದು ಒಂದು ದುರಂತದ ಸಂಗತಿ, ಈ ಕುರಿತು ನವೀನ್ ಅವರ ತಂದೆ ಶೇಖರಗೌಡ ಅವರಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ಸಾಂತ್ವನ ಹೇಳಿದ್ದೇನೆ.
ನವೀನ ಅವರ ಮೃತದೇಹವನ್ನು ಭಾರತಕ್ಕೆ ತರಿಸಿಕೊಳ್ಳುವ ಎಲ್ಲ ಪ್ರಯತ್ನ ನಡೆಸಲಾಗುವುದು.
1/2— Basavaraj S Bommai (@BSBommai) March 1, 2022