ಅಹಿತಕರ ಘಟನೆಗೆ ದಾರಿಮಾಡಿಕೊಡದಂತೆ ಡಿಸಿಗಳಿಗೆ ಸಿಎಂ ಖಡಕ್ ಸೂಚನೆ
ಬೆಂಗಳೂರು: ಹಿಜಾಬ್ ವಿವಾದದಲ್ಲಿ ಭುಗಿಲೆದ್ದಿರುವ ಗಲಭೆಯನ್ನುಬ ತಿಳಿಗೊಳಿಸಲು ಸಿಎಂ ಇಂದು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ್ರು. ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಡಿಸಿ , ಎಸ್.ಪಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ವೀಡಿಯೋ ಸಂವಾದದ ಮುಖ್ಯಾಂಶಗಳು ಕೆಳಗಿನಂತಿವೆ.
1. ಸೋಮವಾರದಿಂದ ಪ್ರೌಢಶಾಲೆ ಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು.
2. ಸೂಕ್ಷ್ಮ ಜಿಲ್ಲೆಗಳಲ್ಲಿ ಪ್ರಮುಖ ಶಾಲೆಗಳನ್ನು ಎಸ್.ಪಿ ಹಾಗೂ ಡಿಸಿ ಗಳು ಭೇಟಿ ಮಾಡಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಅಹಿತಕರ ಘಟನೆಗಳು ಆಗದಂತೆ ಎಚ್ಚರ ವಹಿಸಿ
3. ಶಾಲಾ ಪ್ರಾಂಶುಪಾಲರು, ಶಿಕ್ಷಕರು, ಪೋಷಕರು ಹಾಗೂ ಆಡಳಿತ ಮಂಡಳಿಯೊಂದಿಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿಗಳು ಹಾಗೂ ಡಿಡಿಪಿಐ ಅವರು ನಿರಂತರ ಸಂಪರ್ಕ ಹೊಂದಿರಬೇಕು.
4. ಜಿಲ್ಲೆಯ ಹಿರಿಯರು, ಪ್ರಮುಖರು, ಜನಪ್ರತಿನಿಧಿಗಳೊಂದಿಗೂ ಸಹ ನಿರಂತರ ಸಂಪರ್ಕ ಹೊಂದುವುದು.
6 ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಶಾಂತಿ ಸಭೆಯನ್ನು ನಡೆಸಿ ಉಚ್ಚ ನ್ಯಾಯಾಲಯದ ಆದೇಶವನ್ನು ಅಕ್ಷರಶಃ ಪಾಲಿಸಬೇಕು.
7. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಬೇಕು.
8.ಯಾವುದೇ ಒತ್ತಡಕ್ಕೆ ಮಣಿಯಬಾರದು. ಸಣ್ಣ ಘಟನೆಯನ್ನೂ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು.
9. ಆದ್ಯತೆ ಮೇರೆಗೆ ಕಾನೂನು ಸುವ್ಯವಸ್ಥೆ ಕಾಪಾಡುವುದು. ಸೂಕ್ಷ್ಮ ಪ್ರದೇಶಗಳಲ್ಲಿ ಶಾಂತಿ ಸಭೆಗಳನ್ನು ನಡೆಸಬೇಕು.
10 . ಹೊರಗಿನ ಪ್ರಚೋದನಗೆ ಒಳಗಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಪ್ರದೇಶಗಳನ್ನು ಹಂಚಿಕೆ ಮಾಡಿಕೊಂಡು ನಿಗಾ ವಹಿಸಬೇಕು.
11. ಎಲ್ಲಾ ರಾಜಕೀಯ ಪಕ್ಷಗಳನ್ನು, ಧಾರ್ಮಿಕ ಮುಖಂಡರನ್ನು ಸ್ಥಳೀಯ ಅಧಿಕಾರಿಗಳು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು.
12. ಸಾಮಾಜಿಕ ಮಾಧ್ಯಮಗಳ ಮೂಲಕ ವದಂತಿ ಹಾಗೂ ಪ್ರಚೋದನಕಾರಿ ಸಂದೇಶಗಳು ಹರಡದಂತೆ ನಿಗಾ ವಹಿಸಿ.
13 ಎಲ್ಲಾ ಸಂಘ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು.
14. ಪ್ರಾಂಶುಪಾಲರು ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಳ್ಳಬೇಕು.
15. ಪ್ರತಿಯೊಬ್ಬರೂ ಉಚ್ಚ ನ್ಯಾಯಾಲಯದ ಆದೇಶವನ್ನು ಪಾಲಿಸಬೇಕು. ಯಾವುದೇ ಕಾರಣಕ್ಕೂ ಒಂದು ಅಹಿತಕರ ಘಟನೆ ಜರುಗದಂತೆ ಕಟ್ಟೆಚ್ಚರ ವಹಿಸಬೇಕು.
16. ಸಮಾಜಘಾತುಕ ಶಕ್ತಿಗಳನ್ನು ಗುರುತಿಸಿ ಅವರ ಮೇಲೆ ನಿಗಾ ವಹಿಸಲಾಗಿದೆ ಎಂಬ ಸಂದೇಶ ರವಾನಿಸಬೇಕು.
17. ಮೇಲಿನಿಂದ ಯಾವುದೇ ಆದೇಶಗಳಿಗೆ ಕಾಯದೇ, ಸಂದರ್ಭಕ್ಕೆ ತಕ್ಕಂತೆ ಕ್ರಮ ಕೈಗೊಳ್ಳಬೇಕು.
18. ಮಾಧ್ಯಮಗಳಿಗೆ ಜಿಲ್ಲೆಗಳಲ್ಲಿನ ವಸ್ತುಸ್ಥಿತಿಯನ್ನು ಸರಿಯಾಗಿ ವಿವರಿಸಬೇಕು. ತಪ್ಪು ಮಾಹಿತಿ ಹೋಗದಂತೆ ಎಚ್ಚರ ವಹಿಸಬೇಕು ಸೂಚನೆ ನೀಡಿದ್ರು.