Bengaluru

ಇಂದಿನಿಂದ ಸಿಎಂ ಬೊಮ್ಮಾಯಿ ಮಳೆಪೀಡತ ಪ್ರದೇಶಗಳಲ್ಲಿ ಪ್ರವಾಸ

ಬೆಂಗಳೂರು; ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳು ಮಳೆಯಿಂದ ತತ್ತರಿಸಿವೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಇಂದಿನಿಂದ ಮಳೆ ಪೀಡಿತ ಪ್ರದೇಶಗಳಲ್ಲಿ ಭೇಟಿ ನೀಡುತ್ತಿದ್ದಾರೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಸಂಚಾರ ಮಾಡಲಿದ್ದಾರೆ. ಮಲೆನಾಡು, ಕೊಡಗು, ಕರಾವಳಿ ಭಾಗದಲ್ಲಿ ಕಳೆದ 10 ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿಯವರು ಈಗಾಗಲೇ ಸಂಬಂಧಿಸಿದ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಸಂವಾದ ಮತ್ತು ದೂರವಾಣಿ ಮೂಲಕ ಮಾತನಾಡಿದ್ದಾರೆ. ಈಗ ಸ್ವತಃ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಪರಿಸ್ಥಿತಿ ಅವಲೋಕಿಸಿದ್ದಾರೆ.

Share Post