BengaluruCrime

ಕರಾವಳಿ ಸರಣಿ ಕೊಲೆ; ಮೂರೂ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದೇವೆ – ಸಿಎಂ ಬೊಮ್ಮಾಯಿ

ಬೆಂಗಳೂರು; ಕರಾವಳಿಯಲ್ಲಿ ನಡೆ ಮೂರೂ ಕೊಲೆಗಳನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಂದು ಹಿರಿಯ ಪೊಲೀಸ್‌ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ. ಕೊಲೆಗಾರರನ್ನು ಬಂಧಿಸಲಾಗುತ್ತದೆ ಎಂದು ಹೇಳಿದರು.

ಈಗ ಉಂಟಾಗಿರುವ ಪರಿಸ್ಥಿತಿಯನ್ನು ನಾವು ಸಮರ್ಥವಾಗಿ ಎದುರಿಸುತ್ತಿದ್ದೇವೆ. ಶೀಘ್ರದಲ್ಲೇ ಎಲ್ಲವೂ ಸಹಜ ಸ್ಥಿತಿಗೆ ಬರಲಿದೆ. ನಾವು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಸದ್ಯದಲ್ಲೇ ಕಠಿಣ ತೀರ್ಮಾನಗಳು ಹೊರಬೀಳುತ್ತವೆ ಎಂದು ಸಿಎಂ ಇದೇ ವೇಳೆ ಹೇಳಿದರು. ಈ ಕೊಲೆಗಳ ಹಿಂದೆ ಸಮಾಜಘಾತುಕ ಶಕ್ತಿಗಳಿಂದ ಕುಮ್ಮಕ್ಕು ಇದೆ. ರಾಜಕೀಯ ಪ್ರೇರಣೆ ಕೂಡಾ ಇದೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಬಸವರಾಜ ಬೊಮ್ಮಾಯಿ ಅತ್ಯಂತ ದುರ್ಬಲ ಮುಖ್ಯಮಂತ್ರಿ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಬೊಮ್ಮಾಯಿಯವರು ಸಿದ್ದರಾಮಯ್ಯ ಅವರು ಹೇಳಿದ್ದು ವೇದವಾಕ್ಯ ಅಲ್ಲ, ನಾವು ಏನು ಕ್ರಮ ಕೈಗೊಂಡಿದ್ದೇವೆ ಎಂಬುದು ಜನರ ಮುಂದಿದೆ ಎಂದು ಹೇಳಿದರು.

Share Post