ಕಾಲೇಜಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ಕಾಲೇಜಿನ ಎರಡನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಯತ್ನಿಸಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.
ಟಿ ಸಿ ಪಾಳ್ಯದ ನಿವಾಸಿ ಮೀನಾ (19) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ. ಜೀವನ್ ಭೀಮಾನಗರದ ಮಹಿಮಾ ಕಾಲೇಜಿನಲ್ಲಿ ಬಿಎ ವ್ಯಾಸಂಗ ಮಾಡುತ್ತಿದ್ದಾಳೆ. ಮೀನಾ ಕಾಲೇಜಿಗೆ ಅಕ್ಕನ ಮನೆಯಿಂದ ಬರುತ್ತಿದ್ದಳು. ಆದರೆ ಇಂದು ಕಾಲೇಜಿನಲ್ಲಿ ಪ್ರಾರ್ಥನೆ ನಡೆಯುವಾಗ ಮೀನಾ ಮಹಡಿಯಿಂದ ಜಿಗಿದು ಆತ್ಮಹತ್ಯೆ ಯತ್ನಿಸಿದ್ದಾಳೆ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.