ಕಾಂಗ್ರೆಸ್ನಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ; ಅರ್ಧದಾರಿಯಲ್ಲೇ ತಡೆದ ಪೊಲೀಸರು
ಬೆಂಗಳೂರು; ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿತು. ರೇಸ್ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿ ಬಳಿಯಿಂದ ಮೆರವಣಿಗೆ ಹೊರಟ ಕಾಂಗ್ರೆಸ್ ನಾಯಕರು, ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಯೋಜಿಸಿದ್ದರು. ಆದ್ರೆ ಪೊಲೀಸರು ಅರ್ಧ ದಾರಿಯಲ್ಲೇ ಪ್ರತಿಭಟನಾಕಾರರನ್ನು ತಡೆದರು. ಈ ವೇಳೆ ಸಿದ್ದರಾಮಯ್ಯ, ರಣದೀಪ್ ಸುರ್ಜೇವಾಲಾ ಸೇರಿದಂತೆ ಹಲವು ನಾಯಕರು ರಸ್ತೆಯಲ್ಲೇ ಕುಳಿತು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು.
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಬೇಕು, ಸಿಎಂ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಪ್ರತಿಭಟನೆಯಲ್ಲಿ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಜಾರ್ಜ್, ಕೃಷ್ಣ ಭೈರೇಗೌಡ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.