ಬೆಂಗಳೂರಿನಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ; ಇಂದೇ ಪಟ್ಟಿ ಫೈನಲ್ ಆಗುತ್ತಾ..?
ಬೆಂಗಳೂರು; ಮುಂದಿನ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಇಂದು ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಚುನಾವಣಾ ಸಮಿತಿಯ ಮಹತ್ವದ ಸಭೆ ನಡೆಯುತ್ತಿದೆ. ಬೆಂಗಳೂರು ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ಈ ಸಭೆ ನಡೆಯುತ್ತಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ನೇತೃತ್ವದಲ್ಲಿ ಚರ್ಚೆ ನಡೆಯುತ್ತಿದೆ.
ರಣದೀಪ್ ಸಿಂಗ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಎಂ.ಬಿ.ಪಾಟೀಲ್, ಕೆ.ಹೆಚ್.ಮುನಿಯಪ್ಪ, ಜಿ.ಪರಮೇಶ್ವರ್, ಕೆ.ಜೆ ಜಾರ್ಜ್ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. 150 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಫೈನಲ್ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಇದ್ರಲ್ಲಿ ಐವತ್ತು ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಹೇಳಿದವರಿಗೆ ಹಾಗೂ ಇನ್ನು ಐವತ್ತು ಕ್ಷೇತ್ರಗಳಿಗೆ ಡಿ.ಕೆ.ಶಿವಕುಮಾರ್ ಹೇಳಿದವರಿಗೆ ಟಿಕೆಟ್ ನೀಡಲಾಗುತ್ತದೆ. ಉಳಿದ ಐವತ್ತು ಕ್ಷೇತ್ರಗಳಿಗೆ ಸಾಮೂಹಿಕ ಅಭಿಪ್ರಾಯದ ಮೇಲೆ ತೀರ್ಮಾನ ಮಾಡಲಾಗುತ್ತದೆ ಎಂದು ಹೇಳಲಾಗುತ್ತದೆ.
ಈ ಸಭೆಯಲ್ಲಿ ಹೆಸರು ಫೈನಲ್ ಆದ ಮೇಲೆ ಅದನ್ನು ಸ್ಕ್ರೀನಿಂಗ್ ಕಮಿಟಿಗೆ ಕಳುಹಿಸಿಕೊಡಲಾಗುತ್ತದೆ. ಅಲ್ಲಿ ಅಂತಮವಾದ ಮೇಲೆ ಮೊದಲ ಪಟ್ಟಿ ಬಿಡುಗಡೆಯಾಗುತ್ತದೆ ಎಂದು ತಿಳಿದುಬಂದಿದೆ.