ಕಾಂಗ್ರೆಸ್ ಹೈಕಮಾಂಡ್ ಬುಲಾವ್; ದಿಢೀರ್ ದೆಹಲಿಗೆ ಹೊರಟ ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು; ಡಿಸಿಎಂ ಡಿ.ಕೆ.ಶಿವಕುಮಾರ್ ದಿಢೀರ್ ಅಂತ ದೆಹಲಿಗೆ ಹೊರಟಿದ್ದು, ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿದೆ. ಇಂದು ಬೆಳಗ್ಗೆ ೧೧.೩೦ರ ವಿಮಾನದಲ್ಲಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿದರು. ಕಾಂಗ್ರೆಸ್ ಹೈಕಮಾಂಡ್ ಬುಲಾವ್ ನೀಡಿದ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಅವರು ದಿಢೀರ್ ಅಂತ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ.
ಡಿ.ಕೆ.ಶಿವಕುಮಾರ್ ಅವರು ಮೊದಲಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಲಿದ್ದಾರೆ. ಅನಂತರ ಇತರ ನಾಯಕರನ್ನು ಭೇಟಿಯಾಗುತ್ತಾರೆ ಎಂದು ತಿಳಿದುಬಂದಿದೆ. ಆದ್ರೆ ಕಾಂಗ್ರೆಸ್ ಹೈಕಮಾಂಡ್ ಯಾಕೆ ಅವರನ್ನು ದೆಹಲಿಗೆ ಕರೆಸಿಕೊಂಡಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.