BengaluruPolitics

1000 ಕೋಟಿ ಕಳುಹಿಸಲು ರಾಜ್ಯಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಟಾರ್ಗೆಟ್‌; ಬಿಜೆಪಿ ಆರೋಪ

ಬೆಂಗಳೂರು; ಕಾಂಗ್ರೆಸ್‌ ಹೈಕಮಾಂಡ್‌ ಪಂಚರಾಜ್ಯಗಳ ಚುನಾವಣೆಗೆ ಹಣ ಕಳುಹಿಸಲು ರಾಜ್ಯಸರ್ಕಾರಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ಟಾರ್ಗೆಟ್‌ ನೀಡಿದೆ. ಮೊದಲ ಹಂತವಾಗಿ 1000 ಕೋಟಿ ರೂಪಾಯಿ ಕಳುಹಿಸುವಂತೆ ಸೂಚನೆ ಕೊಟ್ಟಿದೆ ಎಂದು ಬಿಜೆಪಿ ಟ್ವೀಟ್‌ ಮಾಡಿದೆ. ಯಾವ್ಯಾವ ರಾಜ್ಯಕ್ಕೆ ಮೊದಲ ಹಂತದಲ್ಲಿಎಷ್ಟೆಷ್ಟು ಕೋಟಿ ಕಳುಹಿಸಬೇಕು ಎಂಬುದರ ಬಗ್ಗೆ ವಿವರವನ್ನೂ ನೀಡಲಾಗಿದೆ. 

 

ಬಿಜೆಪಿ ಮಾಡಿರುವ ಟ್ವೀಟ್‌ನ ಮಾಹಿತಿ

ರಾಜ್ಯದ @INCKarnataka ಕ್ಕೆ ಪಂಚ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಕೊಟ್ಟಿರುವ ಮೊದಲನೇ ಹಂತದ ₹1000 ಕೋಟಿ ಟಾರ್ಗೆಟ್ ಯಾವ ರಾಜ್ಯಕ್ಕೆ ಎಷ್ಟು?

✔ ತೆಲಂಗಾಣ ಕಾಂಗ್ರೆಸ್‌ಗೆ ₹300 ಕೋಟಿ
✔ ಮಿಜೋರಾಂ ಕಾಂಗ್ರೆಸ್‌ಗೆ ₹100 ಕೋಟಿ
✔ ಛತ್ತಿಸ್‌ಗಢ‌ ಕಾಂಗ್ರೆಸ್‌ಗೆ ₹200 ಕೋಟಿ
✔ ರಾಜಸ್ಥಾನ‌ ಕಾಂಗ್ರೆಸ್‌ಗೆ ₹200 ಕೋಟಿ
✔ ಮಧ್ಯಪ್ರದೇಶ‌ ಕಾಂಗ್ರೆಸ್‌ಗೆ ₹200 ಕೋಟಿ

ಕಮಿಷನ್, ಕಲೆಕ್ಷನ್ ಮೂಲಕ ಸಾವಿರ ಕೋಟಿ ಟಾರ್ಗೆಟ್ ಮಾಡಿ ಸಂಗ್ರಹಿಸುತ್ತಿರುವ ಕಾಂಗ್ರೆಸ್ ಹಣ ಹಂಚುವ ಮುನ್ನವೇ ಸಿಕ್ಕಿ ಬಿದ್ದಿದೆ.

 

Share Post