ರಾಮಮಂದಿರ ಉದ್ಘಾಟನೆಗೆ ಹೋಗದಿರಲು ಕಾಂಗ್ರೆಸ್ ನಾಯಕರ ನಿರ್ಧಾರ
ಬೆಂಗಳೂರು; ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಸಿದ್ಧತೆಗಳು ನಡೆಯುತ್ತಿವೆ. ಈಗಾಗಲೇ ಎಲ್ಲಾ ಗಣ್ಯರಿಗೂ ಆಹ್ವಾನ ನೀಡಲಾಗಿದೆ. ಕೊನೆ ಹಂತದ ಸಿದ್ಧತೆಗಳೂ ಕೂಢಾ ನಡೆಯುತ್ತಿವೆ. ಇತ್ತ ಕಾಂಗ್ರೆಸ್ ನಾಯಕರು ಸಮಾರಂಭಕ್ಕೆ ಆಗಮಿಸುತ್ತಾರಾ, ಇಲ್ಲವಾ ಎಂಬ ಪ್ರಶ್ನೆ ಎದ್ದಿತ್ತು. ಇದಕ್ಕೆ ಈಗ ಉತ್ತರ ಸಿಕ್ಕಿದೆ.
ಕಾಂಗ್ರೆಸ್ ನಾಯಕರು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಹೋಗದಿರಲು ನಿರ್ಧರಿಸಿದ್ದಾರೆ. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಈ ನಿರ್ಧಾರ ಕೈಗೊಂಡಿದಾರೆ ಎಂದು ತಿಳಿದುಬಂದಿದೆ.