Bengaluru

ಕೈ ನಾಯಕರಿಂದ ರಾಜಭವನ ಚಲೋ-ಈಶ್ವರಪ್ಪನನ್ನು ಸಂಪುಟದಿಂದ ಕೈ ಬಿಡುವಂತೆ ರಾಜ್ಯಪಾಲರಿಗೆ ಮನವಿ ಪತ್ರ

ಬೆಂಗಳೂರು: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ರಾಜ್ಯಪಾಲರಲ್ಲಿ ಕಾಂಗ್ರೆಸ್‌ ನಾಯಕರು ಮನವಿ ಮಾಡಿದ್ದಾರೆ.

ಇಂದು ಸಂಜೆ 4ಗಂಟೆಗೆ ಪಾದಯಾತ್ರೆ ಮೂಲಕ ರಾಜಭವನ ಚಲೋ ಮೂಲಕ ಪಾದಯಾತ್ರೆ ನಡೆಸಿ ಮನವಿ ಸಲ್ಲಿಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದ ನಿಯೋಗವು ಪಾದಯಾತ್ರೆ ಮೂಲಕ ವಿಧಾನಸೌಧದಿಂದ ರಾಜಭವನದವರೆಗೆ ಪಾದಯಾತ್ರೆ ಮೂಲಕ ತೆರಳಿ ಮನವಿ ಸಲ್ಲಿಸಿದ್ದಾರೆ. ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಈಶ್ವರಪ್ಪ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕಾಂಗ್ರೆಸ್‌ ನಿಯೋಗ ರಾಜ್ಯಪಾಲರಲ್ಲಿ ಮನವಿ ಮಾಡಿದ್ದಾರೆ.

ಕಳೆದ ಆರು ದಿನಗಳಿಂದ ವಿಧಾನಸಭೆ ಹಾಗೂ ವಿಧಾನಪರಿಷತ್‌ ಕಲಾಪದಲ್ಲಿ ಸಚಿವರನ್ನು ವಜಾ ಮಾಡುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ಕೂಡ ನಡೆಸುತ್ತಿದ್ದಾರೆ. ಸರ್ಕಾರ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಕೆ ಮಾಡಿದ್ದಾರೆ.

Share Post