BengaluruPolitics

ಗೆಲ್ಲೋ ಪಕ್ಷೇತರರಿಗೆ ಗಾಳ ಹಾಕುತ್ತಿರುವ ಕಾಂಗ್ರೆಸ್‌ ನಾಯಕರು; ಯಾರಿಗೆ ಕರೆ ಮಾಡಿದ್ದರು..?

ಬೆಂಗಳೂರು; ನಾಳೆಯೇ ಚುನಾವಣಾ ಫಲಿತಾಂಶ ಆಗಲೇ ಲೆಕ್ಕಾಚಾರಗಳು ಜೋರಾಗಿಯೇ ನಡೆಯುತ್ತಿವೆ. ಫಲಿತಾಂಶಕ್ಕೂ ಮೊದಲೇ ಇತರೆ ಅಭ್ಯರ್ಥಿಗಳನ್ನು ಒಲಿಸಿಕೊಳ್ಳೋ ಪ್ರಯತ್ನಗಳು ನಡೆಯುತ್ತಿವೆ. ಬಹುಮತಕ್ಕಿಂತ ಕಡಿಮೆ ಸೀಟುಗಳು ಬಂದರೆ ಏನು ಮಾಡಬೇಕು ಎಂಬುದರ ಬಗ್ಗೆ ಕಾಂಗ್ರೆಸ್‌ ನಾಯಕರು ತಲೆಕೆಡಿಸಿಕೊಂಡಿದ್ದು, ಗೆಲ್ಲುವ ಸಾಧ್ಯತೆ ಇರುವ ಪಕ್ಷೇತರರನ್ನು ಸಂಪರ್ಕಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಮೂಲಕ ಗೆಲ್ಲೋ ಮುನ್ಸೂಚನೆ ಇರುವ ಇಬ್ಬರು ಪಕ್ಷೇತರರನ್ನು ಸಂಪರ್ಕಿಸಲಾಗಿದೆ ಎಂದು ಹೇಳಲಾಗುತ್ತಿದೆ. ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡ ಅವರನ್ನು ಕಾಂಗ್ರೆಸ್‌ ಸಂಪರ್ಕಿಸಿದೆ ಎಂದು ತಿಳಿದುಬಂದಿದೆ. ಕುಂದಗೋಳದಲ್ಲಿ ಬಿಜೆಪಿ ಅಭ್ಯರ್ಥಿ ಎಮ್.ಆರ್.ಪಾಟೀಲ್ ಮತ್ತು ಪಕ್ಷೇತರ ಅಭ್ಯರ್ಥಿ ಎಸ್‌.ಐ.ಚಿಕ್ಕನಗೌಡರ ನಡುವೆ ಹಣಾಹಣಿ ಇದೆ. ಚಿಕ್ಕನಗೌಡರ್‌ ಅವರೇ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ. ಕುಕ್ಕರ್‌ ಗುರುತಿನಿಂದ ಸ್ಪರ್ಧಿಸಿರುವ ಚಿಕ್ಕನಗೌಡರ್‌ ಅವರು ಜಗದೀಶ್‌ ಶೆಟ್ಟರ್‌ ಅವರ ಬೆಂಬಲಿಗರಾಗಿದ್ದಾರೆ. ಹೀಗಾಗಿ ಶೆಟ್ಟರ್‌ ಮೂಲಕವೇ ಅವರನ್ನು ಸೆಳೆಯುವ ಪ್ರಯತ್ನ ನಡೆದಿದೆ ಎಂದು ಹೇಳಲಾಗುತ್ತಿದೆ.

ಇನ್ನು ದಾವಣಗೆರೆ ಜಿಲ್ಲೆ ಹರಪನಹಳ್ಳಿ ಕ್ಷೇತ್ರದಲ್ಲಿ ಎಂ.ಪಿ.ಪ್ರಕಾಶ್‌ ಅವರ ಪುತ್ರಿ ಎಂ.ಪಿ.ಲತಾ ಅವರು ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಅವರೇ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಕಾಂಗ್ರೆಸ್‌ ನಾಯಕರು ಅವರಿಗೆ ಕರೆ ಮಾಡಿ ಯೋಗಕ್ಷೇಮ ವಿಚಾರಿಸಿದ್ದಾರೆ. ಅವರನ್ನು ಕೂಡಾ ಪಕ್ಷಕ್ಕೆ ಸೆಳೆಯೋ ಎಲ್ಲಾ ಸಾಧ್ಯತೆಗಳೂ ಇವೆ.

Share Post