BengaluruPolitics

ನಾಳೆ ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆ ಬಿಡುಗಡೆ ಸಾಧ್ಯತೆ

ಬೆಂಗಳೂರು; ಇಂದು ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡುತ್ತಿದ್ದು, ನಾಳೆ ಕಾಂಗ್ರೆಸ್‌ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಈಗಾಗಲೇ ಆರು ಉಚಿತ ಘೋಷಣೆಗಳನ್ನು ಮಾಡಿರುವ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಇಂತಹ ಮತ್ತಷ್ಟು ಘೋಷಣೆಗಳು ಇರುತ್ತವೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಘೋಷಿಸಿರುವ ಗ್ಯಾರೆಂಟಿಗಳು ಜನರನ್ನು ಆಕರ್ಷಿಸಿವೆ. ಹೀಗಾಗಿ, ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಇನ್ನೂ ಏನೇನಿರಬಹುದು ಎಂಬ ಕುತೂಹಲ ಶುರುವಾಗಿದೆ.

 

Share Post