BengaluruPolitics

ಕಾಂಗ್ರೆಸ್ ಗ್ಯಾರೆಂಟಿ ಕಾರ್ಡ್ ಮನೆಮನೆಗೆ ತಲುಪಿಸಿ ಬಹಮಾನ ಗೆಲ್ಲಿ; ಆಫರ್

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆ ಮನೆಗೆ ತಲುಪಿಸಿ ಬಹುಮಾನ ಗೆಲ್ಲಿ.
ಬೆಂಗಳೂರು: ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆ ಕುರಿತ ಕಾಂಗ್ರೆಸ್ ಗ್ಯಾರಂಟಿ ಕೋಟಿ ಕಾರ್ಡ್ ಗಳು ಮನೆ, ಮನೆ ತಲುಪಲು ಸಜ್ಜಾಗಿವೆ. ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಎರಡು ಐತಿಹಾಸಿಕ ಗ್ಯಾರಂಟಿ ಯೋಜನೆ ಘೋಷಿಸಿದೆ. ಗೃಹಜ್ಯೋತಿ ಯೋಜನೆ ಮೂಲಕ 200 ಯುನಿಟ್ ವಿದ್ಯುತ್ ಉಚಿತ, ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆ ಯಜಮಾನಿಗೆ 2000 ರೂ. ಪ್ರತಿ ತಿಂಗಳು ಕೊಡಲು ಪಕ್ಷ ತೀರ್ಮಾನಿಸಿದೆ.ಡಿಕೆ ಶವಕುಮಾರ್‌ ಹಾಗೂ ಸಿದ್ದರಾಮಯ್ಯ ಸಹಿ ಹಾಕಿರೋ ಗ್ಯಾರಂಟಿ ಕಾರ್ಡ್ ಅನ್ನು ಮನೆಮನೆಗೆ ತಲುಪಿಸಲು ರೆಡಿಯಾಗಿದೆ.
ಪಕ್ಷದ ಎಲ್ಲಾ ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಕೆಪಿಸಿಸಿ ಕಚೇರಿಯಲ್ಲಿ ಪಡೆದು, ನಿಮ್ಮ ಕ್ಷೇತ್ರದಲ್ಲಿ ಪ್ರತಿ ಬೂತ್ ನ ಮನೆ ಮನೆಗೂ ನೀಡಬೇಕು ಎಂದು ಸೂಚಿಸಿದರು. ಈ ಕುರಿತು ಮಾತನಾಡಿದ ಡಿಕೆಶಿ ಈ ಗ್ಯಾರಂಟಿ ಕಾರ್ಡ್ ಅನ್ನು ಜನರಿಗೆ ನೀಡಿ ನಮ್ಮ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ, ಯಾರಿಗೆಲ್ಲ ಈ ಯೋಜನೆ ಬಗ್ಗೆ ಆಸಕ್ತಿ ಇದೆ ಎಂದು ಅವರ ವಿವರ ಪಡೆಯಬೇಕು. ಈ ಸಮಯದಲ್ಲಿ ಮನೆ ಮನೆಗೆ ಹೋಗಿ ಕಾರ್ಡ್ ನೀಡುವ ನೋಂದಣಿದಾರರ ಹೆಸರು, ದೂರವಾಣಿ ಸಂಖ್ಯೆಯನ್ನು ನೀಡಬೇಕು. ಪ್ರತಿ ಬ್ಲಾಕ್ ಹಾಗೂ ವಿಧಾನಸಭಾ ಕ್ಷೇತ್ರಗಳಲ್ಲಿ ಯಾರು ಹೆಚ್ಚು ಮನೆಗಳಿಗೆ ಈ ಕಾರ್ಡ್ ವಿತರಣೆ ಮಾಡುತ್ತಾರೋ ಅವರಿಗೆ ಆಯಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಹುಮಾನ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷರು ಹೇಲಿದರು.
ಈ ಅವಕಾಶವನ್ನು ಬಳಸಿಕೊಂಡು ಜನರಿಗೆ ಕಾಂಗ್ರೆಸ್ ಕೊಡುಗೆಯನ್ನು ಜನರಿಗೆ ತಲುಪಿಸಬೇಕು. ಒಟ್ಟು 1 ಕೋಟಿ ಕಾರ್ಡ್ ಗಳನ್ನು ಮನೆಗೆ ಕಳುಹಿಸಿಕೊಡಬೇಕು ಎಂದು ನಾನು ಎಲ್ಲಾ ಕಾರ್ಯಕರ್ತರು ಹಾಗೂ ನಾಯಕರಲ್ಲಿ ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ ಎಂದರು.

Share Post