Bengaluru

ದೇಶದ್ರೋಹಿ ಈಶ್ವರಪ್ಪನನ್ನು ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ಕೆಪಿಸಿಸಿ ಧರಣಿ

ಬೆಂಗಳೂರು: ಶಿವಮೊಗ್ಗದಲ್ಲಿ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರಿ ಕಾಲೇಜೊಂದರಲ್ಲಿ ಕೇಸರಿ ಬಾವುಟ ಹಾರಿಸಿದ್ದರ ವಿಚಾರವಾಗಿ ಮಾತನಾಡಿ ಮುಂದೊಂದು ದಿನ ದೆಹಲಿನ ಕೆಂಪು ಕೋಟೆ ಮೇಲೆ ಕೇಸರಿ ಬಾವುಟ ಹಾರುತ್ತದೆ ಎಂಬ ಹೇಳಿದ್ದಾರೆ ಇದು ರಾಷ್ಟ್ರದ್ರೋಹಿ ಹೇಳಿಕೆ. ಧ್ವಜಕ್ಕೆ ಮಾಡಿದ ಅಪಮಾನ. ಇಂಥವರನ್ನು ಸಂಪುಟದಿಂದ ಕೂಡಲೇ ವಜಾ ಮಾಡಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ವಿಧಾನಸಭೆಯಲ್ಲಿ ಕಳೆದ ಐದು ದಿನಗಳಿಂದ ಕೈ ನಾಯಕರು ಅಹೋ ರಾತ್ರಿ ಧರಣಿ ನಡೆಸುತ್ತಿದ್ದಾರೆ, ಪ್ರತಿದಿನ ಕಲಾಪದ ವೇಳೆ ಗದ್ದಲ, ಗಲಾಟೆ ಮಾಡಿ ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. ಮುಂದುವರೆದು ಇಂದು ಬೆಂಗಳೂರಿನ ಕಾಂಗ್ರೆಸ್‌ ಭವನದ ಬಳಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ದೇಶದ್ರೋಹಿ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ಕೆಪಿಸಿಸಿ ನಾನಾ ಘಟಕಗಳ ಮುಖಂಡರು ಹಾಗೂ ಕಾರ್ಯಕರ್ತರು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಬಳಿ ಪ್ರತಿಭಟನೆ ನಡೆಸಿದ್ರು. ಈಶ್ವರಪ್ಪ ವಿರುದ್ಧ ರಾಜ್ಯಾದ್ಯಂತ ಇಂದು ಕಾಂಗ್ರೆಸ್ ಪ್ರತಿಭಟನೆ ಕೈಗೊಂಡಿದೆ.

Share Post