BengaluruPolitics

Congress Protest In Delhi; ದೆಹಲಿಯಲ್ಲಿ ಪ್ರೊಟೆಸ್ಟ್‌ ಮಾಡಿದರೆ ರಾಜ್ಯಕ್ಕೆ ಅನುದಾನ ಬರುತ್ತಾ..?

ಬೆಂಗಳೂರು;  ಈ ಬಾರಿಯ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಕಾಂಗ್ರೆಸ್‌ ಆರೋಪ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸಂಸದ ಡಿ.ಕೆ.ಸುರೇಶ್‌ ನೀಡಿದ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಈ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷ ಪ್ರತಿಭಟನೆಯ ರಾಜಕೀಯ ಶುರು ಮಾಡಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಅನುದಾನ ನೀಡಿದೇ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್‌ ವತಿಯಿಂದ ಹೋರಾಟ ನಡೆಸೋದಕ್ಕೆ ಸಿದ್ಧತೆ ನಡೆಯುತ್ತಿದೆ. ಫೆಬ್ರವರಿ 7ರಂದು ಬೆಳಗ್ಗೆ 11 ಗಂಟೆಗೆ ದೆಹಲಿಯ ಜಂತರ್‌ ಮಂತರ್‌ನಲ್ಲಿ ಕಾಂಗ್ರೆಸ್‌ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯ ಸರ್ಕಾರದ ಎಲ್ಲಾ ಕಾಂಗ್ರೆಸ್‌ ಶಾಸಕರು, ವಿಧಾನಪರಿಷತ್‌ ಸದಸ್ಯರು, ಸಂಸದರು, ರಾಜ್ಯಸಭಾ ಸದಸ್ಯರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಜಂಟಿ ಸುದ್ದಿಗೋಷ್ಠಿ

ಈ ಬಗ್ಗೆ ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ ಮಾತನಾಡಿದ ನಾಯಕರು, ರಾಜ್ಯದಿಂದ 4 ಲಕ್ಷ 30 ಸಾವಿರ ಕೋಟಿ ತೆರಿಗೆ ಸಂಗ್ರಹ ಮಾಡಲಾಗುತ್ತಿದೆ. ಇದೆಲ್ಲಾ ಜಿಎಸ್‌ಟಿ ರೂಪದಲ್ಲಿ ಕೇಂದ್ರಕ್ಕೆ ಹೋಗುತ್ತಿದೆ. ಆದ್ರೆ ನಮಗೆ ಬರಬೇಕಾದ ಹಣವನ್ನು ಕೇಂದ್ರ ಸರ್ಕಾರ ನೀಡುತ್ತಿಲ್ಲ. ನಾಲ್ಕು ವರ್ಷಗಳಲ್ಲಿ ರಾಕ್ಯಕ್ಕೆ 45 ಸಾವಿರ ಕೋಟಿ ರೂಪಾಯಿ ಅನ್ಯಾಯವಾಗಿದೆ ಅಂಕಿ ಅಂಶಗಳ ಸಮೇತ ಬಿಚ್ಚಿಡಲಾಗಿದೆ. ಹಣಕಾಸು ಆಯೋಗ ನಿರ್ಧರಿಸಿದಂತೆ ರಾಜ್ಯಗಳಿಗೆ ಹಣಕಾಸು ನೀಡಬೇಕು. ೧೪ನೇ ಹಣಕಾಸು ಆಯೋಗದಂತೆ ರಾಜ್ಯಕ್ಕೆ ಶೇ.೪೨, ೧೫ನೇ ಹಣಕಾಸು ಆಯೋಜದಂತೆ ಶೇ ೪೧ರಷ್ಟು ತೆರಿಗೆ ಹಣ ನೀಡಬೇಕು. ಆದ್ರೆ, ಕೇಂದ್ರ ಸರ್ಕಾರ ನಮಗೆ ಅನ್ಯಾಯವಾಗುತ್ತಿದೆ. ನಿರ್ಮಲಾ ಸೀತಾರಾಮನ್‌ ಅವರು ನಮ್ಮ ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ. ಆದರೂ ಅವರು ನಮ್ಮ ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ. ೧೧ ಸಾವಿರದ ೪೯೫ ಕೋಟಿ ರೂಪಾಯಿ ನೀಡುವಂತೆ ನಾವು ಮನವಿ ಮಾಡಿದ್ದೇವೆ. ಆದ್ರೆ, ನಿರ್ಮಲಾ ಸೀತಾರಾಮನ್‌ ನಮ್ಮ ಮನವಿಯನ್ನು ತಿರಸ್ಕಾರ ಮಾಡಿದ್ಧಾರೆ. ಹೀಗಾಗಿ ನಾವು ಹೋರಾಟ ಮಾಡಬೇಕಾದ ಅನಿವಾರ್ಯತೆ ಬಂದಿದೆ ಎಂದು ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಹೇಳಿದ್ದಾರೆ.

ನಾಳೆ ಸಂಜೆಯೇ ದೆಹಲಿಗೆ ನಾಯಕರ ಪ್ರಯಾಣ

ರಾಜ್ಯದಲ್ಲಿ ಜಲಮೂಲಗಳ ಅಭೀವೃದ್ಧಿ, ರಸ್ತೆಗಳ ನಿರ್ಮಾಣಕ್ಕೆ ನಾವು ಹಣ ಕೇಳಿದ್ದೆವು. ಆದ್ರೆ ನಮಗೆ ಅನುದಾನ ಕೊಟ್ಟಿಲ್ಲ. ಹೀಗಾಗಿ ನಾವೆಲ್ಲಾ ನಾಳೆ ಸಂಜೆಯೇ ದೆಹಲಿಗೆ ತೆರಳುತ್ತಿದ್ದೇವೆ. ನಾಡಿದ್ದು ಬೆಳಗ್ಗೆ ೧೧ ಗಂಟೆಗೆ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

   ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಈ ಹೋರಾಟದಿಂದ ಲಾಭವಾಗುತ್ತಾ..?

ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡೂ ಈ ಪ್ರತಿಭಟನೆ ಮಾಡಲಾಗುತ್ತಿದೆ. ಯಾಕಂದ್ರೆ ಕಳೆದ ವರ್ಷಗಳಲ್ಲೂ ಕೂಡಾ ರಾಜ್ಯಕ್ಕೆ ಅನ್ಯಾಯ ಆಗಿದೆ. ಆದ್ರೆ ಈ ಹಿಂದೆ ಕಾಂಗ್ರೆಸ್‌ ಪ್ರತಿಭಟನೆ ಮಾಡಿದ ಉದಾಹರಣೆ ಇಲ್ಲ. ಆದ್ರೆ ಈ ಬಾರಿ ದೆಹಲಿಗೇ ಹೋಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಇದರಿಂದಾಗಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಅನಕೂಲ ಆಗಬಹುದು ಅನ್ನೋ ಲೆಕ್ಕಾಚಾರ ಕೂಡಾ ಕಾಂಗ್ರೆಸ್‌ಗಿದೆ. ನಾವು ದೆಹಲಿಗೆ ಹೋಗಿ ಪ್ರತಿಭಟನೆ ಮಾಡಿದೆವು. ಆದರೂ ಕೇಂದ್ರ ಸರ್ಕಾರ ನಮಗೆ ಬರಬೇಕಾದ ಹಣ ನೀಡಲಿಲ್ಲ ಎಂದು ಪ್ರಚಾರದ ವೇಳೆ ಹೇಳಬಹುದು. ಆದ್ರೆ ಇದು ಎಷ್ಟು ವರ್ಕೌಟ್‌ ಆಗುತ್ತೋ ಗೊತ್ತಿಲ್ಲ.

 

Share Post