ರಾಹುಲ್ ಗಾಂಧಿ ವಿಚಾರಣೆಗೆ ವಿರೋಧ; ಕಾಂಗ್ರೆಸ್ನಿಂದ ರಾಜಭವನ ಚಲೋ
ಬೆಂಗಳೂರು; ನ್ಯಾಷನಲ್ ಹೆರಾಲ್ಡ್ ಕೇಸ್ನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರಾಹುಲ್ ಗಾಂಧಿಯವರನ್ನು ವಿಚಾರಣೆ ನಡೆಸುತ್ತಿರುವುದು ವಿರೋಧಿಸಿ ಕಾಂಗ್ರೆಸ್ ಇಂದು ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಅದೇ ರೀತಿ, ಬೆಂಗಳೂರಿನಲ್ಲೂ ಕಾಂಗ್ರೆಸ್ ನಾಯಕರು ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದಾರೆ.
ಕಾಂಗ್ರೆಸ್ ಕಚೇರಿಯಿಂದ ರಾಜಭವನದವರೆಗೆ ಕಾಂಗ್ರೆಸ್ನಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ. ರಾಜಭವನದವರೆಗೆ ಮೆರವಣಿಗೆ ನಡೆಸಿ, ರಾಜಭವನಕ್ಕೆ ಮುತ್ತಿಗೆ ಹಾಕಲು ಸಿದ್ಧತೆ ನಡೆದಿದೆ.
ಕಾಂಗ್ರೆಸ್ ಪ್ರತಿಭಟನೆಯಿಂದಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ದಾರಿ ಮಧ್ಯದಲ್ಲೇ ಪ್ರತಿಭಟನೆಯನ್ನು ತಡೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.