BengaluruPolitics

ಗ್ಯಾರೆಂಟಿ ಘೋಷಣೆ ಬೆನ್ನಲ್ಲೇ ಬಿಜೆಪಿಗರ ಕಾಲೆಳೆದ ಕಾಂಗ್ರೆಸ್‌

ಬೆಂಗಳೂರು; ಇಂದು ರಾಜ್ಯ ಸರ್ಕಾರ ಐದೂ ಗ್ಯಾರೆಂಟಿಗಳನ್ನು ಘೋಷಣೆ ಮಾಡಿದೆ. ಈ ಬೆನ್ನಲ್ಲೇ ಕಾಂಗ್ರೆಸ್‌ ಬಿಜೆಪಿ ನಾಯಕರ ಕಾಲೆಳೆದಿದೆ. ಗ್ಯಾರೆಂಟಿಗಳ ಘೋಷಣೆ ತಡವಾಗಿದ್ದಕ್ಕೆ ಲೇವಡಿ ಮಾಡುತ್ತಿದ್ದ ಬಿಜೆಪಿ ನಾಯಕರಿಗೆ ಈ ಮೂಲಕ ಕಾಂಗ್ರೆಸ್‌ ಉತ್ತರ ನೀಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಯವರ ಹೆಸರುಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

ಟ್ವೀಟ್‌ನಲ್ಲಿ ಏನಿದೆ..?
ನಳಿನ್ ಕುಮಾರ್ ಕಟೀಲ್ ಅವರೇ, ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ!, ಬೊಮ್ಮಾಯಿ ಅವರೇ ನಿಮ್ಮ ಮನೆಗೂ ಫ್ರೀ!, ಶೋಭಾ ಕರಂದ್ಲಾಜೆ ಅವರೇ, ನಿಮಗೂ ಪ್ರಯಾಣ ಫ್ರೀ!, ಸಿ.ಟಿ ರವಿ ಅವರೇ, ನಿಮ್ಮ ಮನೆಯವರಿಗೂ 2,000 ಫ್ರೀ, ಪದವಿ ಪಡೆದ ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀʼ

Share Post