BengaluruPolitics

ಕಾಂಗ್ರೆಸ್‌ ಟಿಕೆಟ್‌ಗೆ ಅರ್ಜಿ ಸಲ್ಲಿಕೆ ದಿನಾಂಕ ನ.21ರವರೆಗೆ ವಿಸ್ತರಣೆ

ಬೆಂಗಳೂರು; 2023ರಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳಿಂದ ಅರ್ಜಿ ಕರೆಯಲಾಗಿತ್ತು. ಕೊನೆಯ ದಿನಾಂಕ ನವೆಂಬರ್‌ 15ಕ್ಕೆ ಮುಕ್ತಾಯವಾದರೂ ಹಾಲಿ ಶಾಸಕರು ಸೇರಿ ಸಾಕಷ್ಟು ಜನ ಇನ್ನೂ ಅರ್ಜಿ ಸಲ್ಲಿಕೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್‌ 21ಕ್ಕೆ ವಿಸ್ತರಣೆ ಮಾಡಿದೆ.

ಕಾಂಗ್ರೆಸ್‌ನ 20ಕ್ಕೂ ಹೆಚ್ಚು ಹಾಲಿ ಶಾಸಕರು ಇನ್ನೂ ಟಿಕೆಟ್‌ಗಾಗಿ ಅರ್ಜಿ ಸಲ್ಲಿಕೆ ಮಾಡಿಲ್ಲ. ಇನ್ನೂ ಒಂದಷ್ಟು ಟಿಕೆಟ್‌ ಆಕಾಂಕ್ಷಿಗಳು ಅರ್ಜಿ ಪಡೆದುಕೊಂಡು ಹೋಗಿದ್ದಾರೆ. ಆದ್ರೆ ಅದನ್ನು ಸಲ್ಲಿಕೆ ಮಾಡಿಲ್ಲ. ಕೆಲವರು ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ ಮಾಡುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ದಿನಾಂಕವನ್ನು ಮುಂದೂಡಿಕೆ ಮಾಡಿದೆ.

Share Post