BengaluruPolitics

ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ನಿಂದ ಪ್ರತಿಭಟನೆ

ಬೆಂಗಳೂರು; ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ಧ ಇಂದು ಕಾಂಗ್ರೆಸ್‌ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ನಲವತ್ತು ಪರ್ಸೆಂಟ್‌ ಕಮೀಷನ್‌, ಕಳಪೆ ಕಾಮಗಾರಿ, ಅಸಮರ್ಪಕ ಕಸ ವಿಲೇವಾರಿ ಸೇರಿದಂತೆ ಹಲವು ವಿಚಾರಗಳನ್ನಿಟ್ಟುಕೊಂಡು ಕಾಂಗ್ರೆಸ್‌ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು.

ಸುಮಾರು 300ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ಕಾಂಗ್ರೆಸ್‌ ಪ್ರತಿಭಟನೆ ನಡೆದಿದೆ. ಟ್ರಿನಿಟಿ ಸರ್ಕಲ್‌ ಬಳಿ ನಡೆದ ಪ್ರತಿಭಟನೆಯಲ್ಲಿ   ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಸೇರಿದಂತೆ ಹಲವು ಕಾಂಗ್ರೆಸ್‌ ನಾಯಕರು ಪಾಲ್ಗೊಂಡಿದ್ದರು.

Share Post