BengaluruPolitics

ಕೆಂದ್ರ ಸರ್ಕಾರದಿಂದ ವಿರೋಧ ಪಕ್ಷ ಮುಗಿಸುವ ಸಂಚು; ಪ್ರಿಯಾಂಕ್‌ ಖರ್ಗೆ

ಬೆಂಗಳೂರು; ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ವಿರೋಧ ಪಕ್ಷವನ್ನು ಮುಗಿಸುವ ಸಂಚು ನಡೆಯುತ್ತಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಪ್ರಿಯಾಂಕ್‌ ಖರ್ಗೆ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಈ ಹಿಂದಿನ ಬಿಜೆಪಿ ಸರ್ಕಾರ ಡಿ.ಕೆ.ಶಿವಕುಮಾರ್‌ ಅವರ ವಿರುದ್ಧ ಸಂಚು ರೂಪಿಸಿತ್ತು. ಕೊಲೆ ಮಾಡಿದರೂ ಅಂತಹವರಿಗೆ ಏನೂ ಆಗಿಲ್ಲ. ಆದ್ರೆ ನಮ್ಮನ್ನು ಮಾತ್ರ ಬಿಜೆಪಿ ಹೆಸರಿಸುವ ಕೆಲಸ ಮಾಡುತ್ತಿದೆ ಎಂದು ಪ್ರಿಯಾಂಕ್‌ ಖರ್ಗೆ ಆರೋಪಿಸಿದರು. ವಿಪಕ್ಷದ ನಾಯಕರ ಧ್ವನಿ ಅಡಗಿಸಲು ನಿರಂತರ ಪ್ರಯತ್ನ ನಡೆಯುತ್ತಿದೆ. ಅದಕ್ಕಾಗಿ ಐಟಿ, ಇಡಿ ಮೂಲಕ ಹೆದರಿಸಲಾಗುತ್ತಿದೆ. ಎಐಸಿಸಿ ಅಧ್ಯಕ್ಷರಿಂದ ಹಿಡಿದು ಕೆಪಿಸಿಸಿ ಅಧ್ಯಕ್ಷರ ತನಕವೂ ನಾಯಕರ ವಿರುದ್ದ ಸಂಚು ರೂಪಿಸುತ್ತಿದೆ ಎಂದು ಪ್ರಿಯಾಂಕ್‌ ಖರ್ಗೆ ಆಪಾದಿಸಿದ್ದಾರೆ.

Share Post