ಕೊರೊನಾ ನಾಲ್ಕನೇ ಅಲೆ; ಸಿಎಂಗಳ ಜೊತೆ ಮೋದಿ ಸಭೆ ಆರಂಭ
ನವದೆಹಲಿ: ಕೊರೊನಾ ನಾಲ್ಕನೇ ಅಲೆ ಬರುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಹಾಗೂ ಮಾರ್ಗಸೂಚಿ ಅಳವಡಿಕೆ ಸಂಬಂಧ ಪ್ರಧಾನಿ ನರೇಂದ್ರ ಅವರು ಹಲವು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸುತ್ತಿದ್ದಾರೆ. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಾ ಈ ವರ್ಚುಯಲ್ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ರಾಜ್ಯದಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು, ಬೂಸ್ಟರ್ ಡೋಸ್ ಲಸಿಕೆ ವಿತರನೆ ಸೇರಿದಂತೆ ವಿವಿಧ ಮಾಹಿತಿಗಳನ್ನು ಪ್ರಧಾನಿ ಜೊತೆ ಹಂಚಿಕೊಳ್ಳುತ್ತಿದ್ದಾರೆ.
ಮುಂದಿನ ತಿಂಗಳು ಕೊರೊನಾ ನಾಲ್ಕನೇ ದೇಶದಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ಎಲ್ಲಾ ರಾಜ್ಯಗಳೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿವೆ. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡಾ ಕೊರೊನಾ ಹರಡದಂತೆ ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಪಹತ್ವದ ಸಭೆ ನಡೆಸುತ್ತಿದ್ದಾರೆ.