Bengaluru

ಕೊರೊನಾ ನಾಲ್ಕನೇ ಅಲೆ ಹಿನ್ನೆಲೆ; ಯಾವುದೇ ಕಾರಣಕ್ಕೂ ಶಾಲೆ ಮುಚ್ಚಲ್ಲ – ಬಿ.ಸಿ.ನಾಗೇಶ್‌

ಬೆಂಗಳೂರು: ಜೂನ್‌ ತಿಂಗಳಲ್ಲಿ ಕೊರೊನಾ ನಾಲ್ಕನೇ ಅಲೆ ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದ್ರೆ, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನಿಗದಿಯಂತೆ ಮೇ 16ರಿಂದ ಶಾಲೆಗಳು ಪ್ರಾರಂಭ ಆಗುತ್ತವೆ ಎಂದರು.

ಜೂನ್, ಜುಲೈನಲ್ಲಿ 4ನೇ ಅಲೆ ಇರಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಕೊರೊನಾ ತಡೆಗಟ್ಟುವ ಸಲುವಾಗಿ ಸಿಎಂ ಬೊಮ್ಮಾಯಿಯವರು ಸಭೆ ನಡೆಸಿ, ಹಲವು ಮುಂಜಾಗ್ರತೆಗಳನ್ನು ಕೈಗೊಳ್ಳುವ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ.  ತಾಂತ್ರಿಕ ಸಲಹಾ ಸಮಿತಿ ನೀಡುವ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುತ್ತೇವೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಶಾಲೆಗಳು ಮುಚ್ಚುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.

Share Post