BengaluruHealth

ಕೊರೊನಾ ಭೀತಿ; ರಾಜ್ಯದಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ ಸಾಧ್ಯತೆ

ಬೆಂಗಳೂರು; ಚೀನಾದಲ್ಲಿ ಕೊರೋನಾ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಭಾರತದಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುತ್ತಿವೆ. ರಾಜ್ಯದಲ್ಲಿ ಇಂದಿನಿಂದ ಹೊಸ ಮಾರ್ಗಸೂಚಿ ಜಾರಿಗೆ ಬರುವ ಸಾಧ್ಯತೆ ಇದೆ.

ಇಂದು ಬೆಂಗಳೂರಿನಲ್ಲಿ ಈ ಸಂಬಂಧ ಮಹತ್ವದ ಸಭೆ ನಡೆಯಲಿದೆ. ಕಂದಾಯ ಸಚಿವ ಆರ್.ಅಶೋಕ್​ ನೇತೃತ್ವದಲ್ಲಿ ಹೈವೋಲ್ಟೇಜ್ ಮೀಟಿಂಗ್​ ನಡೆಯಲಿದ್ದು, ಆರೋಗ್ಯ ಇಲಾಖೆ ಸಚಿವ ಡಾ.ಕೆ.ಸುಧಾಕರ್​​​, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್‌ ಹಿನ್ನೆಲೆಯಲ್ಲಿ ಮಾರ್ಗಸೂಚಿ ರೂಪಿಸಲು ಈ ಸಭೆ ನಡೆಸಲಾಗುತ್ತಿದೆ. ಸಭೆಯ ನಂತರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

 

Share Post