BengaluruPolitics

ಪ್ರಮಾಣವಚನಕ್ಕೆ ಕ್ಷಣಗಣನೆ; ಸಿದ್ದು, ಡಿಕೆಶಿ ಜೊತೆ 8 ಮಂದಿ ಪ್ರಮಾಣವಚನ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಗೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 12.30ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಇದರಲ್ಲಿ ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಇವರ ಜೊತೆಗೆ ಎಂಟು ಶಾಸಕರು ಸಂಪುಟ ಸೇರಲಿದ್ದಾರೆ.

ದೆಹಲಿಯಲ್ಲಿ ರಾತ್ರಿಯಿಡೀ ಸಂಪುಟ ಕಸರತ್ತು ನಡೆದಿದೆ. ಕೆ.ಸಿ.ವೇಣುಗೋಪಾಲ್‌ ಅವರ ನಿವಾಸದಲ್ಲಿ ರಾತ್ರಿ ಎರಡು ಗಂಟೆಯವರೆಗೂ ಚರ್ಚೆ ನಡೆದಿದ್ದು, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ತಮ್ಮ ಆಪ್ತರನ್ನು ಸಂಪುಟಕ್ಕೆ ಸೇರಿಸುವುದು ಹಾಗೂ ಅವರಿಗೆ ಪ್ರಮುಖ ಖಾತೆಗಳು ಬೇಕೆಂದು ಪಟ್ಟು ಹಿಡಿದಿದ್ದರು. ಹೀಗಾಗಿ ಇಬ್ಬರಲ್ಲೂ ಒಮ್ಮತ ಮೂಡಿಲ್ಲ. ಹೀಗಾಗಿ ಕೇವಲ 8 ಶಾಸಕರನ್ನು ಮಾತ್ರ ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತಿದೆ.

ಡಾ.ಜಿ.ಪರಮೇಶ್ವರ್‌, ಪ್ರಿಯಾಂಕ್‌ ಖರ್ಗೆ, ಜಮೀರ್‌ ಅಹ್ಮದ್‌ ಖಾನ್‌, ಕೆ.ಜೆ.ಜಾರ್ಜ್‌, ರಾಮಲಿಂಗಾರೆಡ್ಡಿ, ಎಂ.ಬಿ.ಪಾಟೀಲ್‌, ಸತೀಶ್‌ ಜಾರಕಿಹೊಳಿ ಹಾಗೂ ಕೆ.ಎಚ್‌.ಮುನಿಯಪ್ಪ ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಇನ್ನು ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಅವರನನು ಹಂಗಾಮಿ ಸ್ಪೀಕರ್‌ ಆಗಿ ನೇಮಕ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ.

Share Post