ಮತ ಎಣಿಕೆ ಪ್ರಕ್ರಿಯೆ ಆರಂಭ; ಸರಿಯಾಗಿ 8 ಗಂಟೆಗೆ ಅಂಚೆ ಮತ ಎಣಿಕೆ
ಬೆಂಗಳೂರು; ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಎಲ್ಲೆಡೆ ಸ್ಟ್ರಾಂಗ್ ರೂಮ್ ಓಪನ್ ಮಾಡಲಾಗಿದ್ದು, ಮತ ಎಣಿಕೆಗೆ ಸಿದ್ಧತೆ ನಡೆಸಲಾಗುತ್ತಿದೆ. ಇನ್ನೇ ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ನಡೆಯಲಿದೆ. ಮೊದಲಿಗೆ ಅಂಚೆ ಮತಗಳ ಎಣಿಕೆ ಕಾರ್ಯ ನಡೆಯಲಿದೆ.
ಮತ ಎಣಿಕೆ ಕೇಂದ್ರಗಳ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮತಕೇಂದ್ರ ಬಳಿ ಯಾವುದೇ ಗಲಾಟೆ ನಡೆಯದಂತೆ ತಡೆಯಲು 144 ಸೆಕ್ಷನ್ ಜಾರಿ ಮಾಡಲಾಗಿದೆ. ರಾಜ್ಯಾದ್ಯಂತ 2615 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇದರಲ್ಲಿ 2430 ಪುರುಷರು, 184 ಮಹಿಳೆಯರು ಹಾಗೂ ಇಬ್ಬರು ತೃತೀಯ ಲಿಂಗಿಗಳು ಸೇರಿದ್ದಾರೆ.
ಬಿಜೆಪಿ- 224, ಕಾಂಗ್ರೆಸ್ – 223, ಜೆಡಿಎಸ್ – 207, ಎಎಪಿ – 209, ಬಿಎಸ್‌ಪಿ – 133, ಸಿಪಿಐ(ಎಂ) – 4, ಜೆಡಿಯು – 8, ಎನ್‌ಪಿಪಿ – 2, ಪಕ್ಷೇತರ – 918, ನೋಂದಾಯಿತ, ಮಾನ್ಯತೆ ರಹಿತ ಪಕ್ಷಗಳ 685 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.