BengaluruPolitics

ಮಲ್ಲಿಕಾರ್ಜುನ ಖರ್ಗೆಗೆ ಸಮನ್ಸ್‌ ಜಾರಿ ಮಾಡಿದ ಕೋರ್ಟ್‌; ವಿಚಾರಣೆಗೆ ಹಾಜರಾಗ್ತಾರಾ ಎಐಸಿಸಿ ಅಧ್ಯಕ್ಷ..?

ದೆಹಲಿ; ಪಂಜಾಬ್‌ನ ಸಂಗ್ರೂರ್‌ ನ್ಯಾಯಾಲಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಮನ್ಸ್‌ ಜಾರಿ ಮಾಡಿದೆ. ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಸಮನ್ಸ್‌ ಜಾರಿ ಮಾಡಲಾಗಿದೆ.

ಭಾಷಣವೊಂದರಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಬಜರಂಗದಳವನ್ನು ಅಲ್‌ಕೈದಾ ಸಂಘಟನೆಗೆ ಹೋಲಿಸಿದ್ದರು ಎನ್ನಲಾಗಿದೆ. ಈ ಸಂಬಂಧ ಬಜರಂಗದಳ ಕಾರ್ಯಕರ್ತರೊಬ್ಬರು ಕೋರ್ಟ್‌ ಮೊರೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್‌ ವಿಚಾರಣೆ ನಡೆಸುತ್ತಿದ್ದು, ಖರ್ಗೆಗೆ ಸಮನ್ಸ್‌ ಜಾರಿ ಮಾಡಿದೆ. ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.

Share Post