BengaluruHealth

ಕೊವಿಡ್‌ ಪ್ರಕರಣಗಳ ಹೆಚ್ಚಳ; ಮಧ್ಯಾಹ್ನ 3ಕ್ಕೆ ತಾಂತ್ರಿಕ ಸಲಹಾ ಸಮಿತಿ ಸಭೆ

ಬೆಂಗಳೂರು; ಬೆಂಗಳೂರಿನಲ್ಲಿ ಕೊವಿಡ್‌ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊವಿಡ್‌ ನಾಲ್ಕನೇ ಅಲೆ ಬರುವ ಭೀತಿ ಎದುರಾಗಿದೆ. ಹೀಗಾಗಿ ಸರ್ಕಾರ ಇದನ್ನು ಗಂಭಿರವಾಗಿ ತೆಗೆದುಕೊಂಡಿದೆ. ಈಗಾಗಲೇ ಮಾಸ್ಕ್‌ ಕಡ್ಡಾಯ ಮಾಡಿರುವ ಸರ್ಕಾರ, ಮತ್ತಷ್ಟು ಬಿಗಿ ನಿಯಮಗಳನ್ನು ಜಾರಿಗೊಳಿಸುವ ಸಾಧ್ಯತೆ ಇದೆ.

ಇಂದು ಮಧ್ಯಾಹ್ನ 3 ಗಂಟೆಗೆ ಈ ಬಗ್ಗೆ ಚರ್ಚಿಸಲು ಆರೋಗ್ಯ ಸಚಿವ ಕೆ.ಸುಧಾಕರ್‌ ಕೊವಿಡ್‌ ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದಿದ್ದಾರೆ. ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ನಾಲ್ಕನೇ ಅಲೆ ಹಾಗೂ ಪ್ರಸ್ತು ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಲಿದ್ದಾರೆ. ಅನಂತರ, ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.

Share Post