BengaluruHealth

ಕೊವಿಡ್‌ ನಿಯಂತ್ರಣಕ್ಕೆ ಕಠಿಣ ಮಾರ್ಗಸೂಚಿ; ಶಾಲಾ ಸಮಾರಂಭಕ್ಕೆ ಬ್ರೇಕ್‌

ಬೆಂಗಳೂರು: ಒಮಿಕ್ರಾನ್‌ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಲ್ಲಿ ರಾಜ್ಯದಲ್ಲಿ ಹೊಸ ಕೊವಿಡ್‌ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಅದರ ವಿವರ ಇಲ್ಲಿದೆ.

  1.  ಮಾಲ್‌, ಚಿತ್ರಮಂದಿರ ಪ್ರವೇಶಕ್ಕೆ 2 ಡೋಸ್‌ ಕಡ್ಡಾಯ
  2. ಕೇರಳ, ಮಹಾರಾಷ್ಟ್ರ ಗಡಿಯಲ್ಲಿ ಕುಟ್ಟುನಿಟ್ಟಿನ ಕ್ರಮ
  3. ಟೆಸ್ಟ್‌, ಟ್ರ್ಯಾಕ್‌, ಟ್ರೀಟ್‌ ಹಾಗೂ ವ್ಯಾಕ್ಸಿನೇಷನ್‌ಗೆ ಒತ್ತು
  4. ಸಭೆಗಳಲ್ಲಿ 500 ಜನಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ
  5. ಮದುವೆ ಸಮಾರಂಭಗಳಿಗೂ 500ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ
  6. ಎಲ್ಲಾ ಸರ್ಕಾರಿ ಸಿಬ್ಬಂದಿಗೆ 2 ಡೋಸ್‌ ಲಸಿಕೆ ಕಡ್ಡಾಯ
  7. ಗ್ರಾಮೀಣ ಭಾಗದಲ್ಲಿ ಮಾಸ್ಕ್‌ ಹಾಕದಿದ್ದರೆ 100 ರೂಪಾಯಿ ದಂಡ
  8. ರೂಲ್ಸ್‌ ಬ್ರೇಕ್‌ ಮಾಡಿದರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ
  9. ಶಾಲಾ ಮಕ್ಕಳ ಪೋಷಕರು 2 ಡೋಸ್‌ ಲಸಿಕೆ ಪಡೆದಿರಬೇಕು
  10. ಶಾ-ಕಾಲೇಜುಗಳಲ್ಲಿ ಸಭೆ-ಸಮಾರಂಭಕ್ಕೆ ಅವಕಾಶವಿಲ್ಲ
  11. ಏರ್‌ಪೋರ್ಟ್‌ಗಳಲ್ಲಿ ನೆಗೆಟಿವ್‌ ರಿಪೋರ್ಟ್‌ ಬಂದರೆ ಮಾತ್ರ ಹೊರಕ್ಕೆ
  12. ರಾಜ್ಯದಲ್ಲಿ ಪ್ರತಿನಿತ್ಯ 1 ಲಕ್ಷ ಡೋಸ್‌ ಲಸಿಕೆ ವಿತರಣೆ
  13. ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವಂತಿಲ್ಲ
  14. 2022ರ ಜನವರಿ 15ರವರೆಗೆ ಯಾವುದೇ ಕಾರ್ಯಕ್ರಮ ನಡೆಸುವಂತಿಲ್ಲ
  15. ಈಗ ವರದಿಯಾಗಿರುವ ಎರಡೂ ಪ್ರಕರಣಗಳ ಪರೀಕ್ಷಾ ವರದಿಯನ್ನು ವಿಶ್ಲೇಷಿಸಿ ಸಲಹೆ ನೀಡುವಂತೆ ಸಿಎಂ ಸೂಚನೆ
  16. ಭಾರತ ಸರ್ಕಾರಕ್ಕೆ ಪತ್ರ ಬರೆದು, ಎನ್ ಸಿ ಬಿ ಎಸ್ ಪ್ರಯೋಗಾಲಯದ ವಿವರವಾದ ವರದಿ ಒದಗಿಸುವಂತೆ ಮನವಿ ಮಾಡಲಾಗುವುದು
  17. ನರ್ಸಿಂಗ್, ಅರೆವೈದ್ಯಕೀಯ ತರಬೇತಿ ಸಂಸ್ಥೆಗಳಲ್ಲಿ ಶೇ. 100 ರಷ್ಟು ಪರೀಕ್ಷೆ ನಡೆಸುವುದು. 65 ವರ್ಷ ಮೇಲಿನ ವ್ಯಕ್ತಿಗಳು ಹಾಗೂ ಇತರ ಆರೋಗ್ಯ ಸಮಸ್ಯೆ ಇರುವ ವ್ಯಕ್ತಿಗಳಿಗೆ ಸಹ ಪರೀಕ್ಷೆ ನಡೆಸಲಾಗುವುದು.
  18. ಶಾಲೆಗಳಲ್ಲಿ ಸದ್ಯಕ್ಕೆ ತರಗತಿಗಳನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲಾಗುವುದು. ಅದಾಗ್ಯೂ ಶಾಲೆಗಳಲ್ಲಿ ತೀವ್ರ ನಿಗಾ ವಹಿಸಲು ಸೂಚಿಸಲಾಗಿದೆ.
  19. ಪರೀಕ್ಷಾ ಸಾಮರ್ಥ್ಯ ಹಾಗೂ ಪರೀಕ್ಷಾ ಪ್ರಮಾಣದ ಗುರಿ ಹೆಚ್ಚಿಸಲಾಗುವುದು. (increased to 1 lakh) ವಿಶೇಷವಾಗಿ ಆರೋಗ್ಯ ಕಾರ್ಯಕರ್ತರ ಪರೀಕ್ಷೆ ಹೆಚ್ಚಿಸಬೇಕೆಂದು ಸೂಚನೆ ನೀಡಲಾಗಿದೆ. ಇದಕ್ಕೆ ಅಗತ್ಯ ಮಾನವ ಸಂಪನ್ಮೂಲ ಒದಗಿಸಲು ತೀರ್ಮಾನಿಸಲಾಯಿತು.
  20. ಆರೋಗ್ಯ ಇಲಾಖೆ ಚಿಕಿತ್ಸಾ ಸೌಲಭ್ಯ ಒದಗಿಸಲು ಸಿದ್ಧತೆ ನಡೆಸಿಕೊಳ್ಳಬೇಕು. ಆಕ್ಸಿಜನೇಟೆಡ್ ಬೆಡ್ ಗಳನ್ನು ಸಜ್ಜುಗೊಳಿಸಬೇಕು; ಆಕ್ಸಿಜನ್ ಪ್ಲಾಂಟ್ ಗಳನ್ನು ಸಜ್ಜುಗೊಳಿಸಬೇಕು ಎಂದು ಸೂಚಿಸಲಾಗಿದೆ.
  21. ಆಕ್ಸಿಜನ್ ಲಭ್ಯತೆ, ಸಾಗಾಣಿಕೆ, ಪೂರೈಕೆ ಜಾಲವನ್ನು ಜಾಗೃತಗೊಳಿಸಬೇಕು.

 

Share Post