Bengaluru

ಇಂದಿನಿಂದ ಮಕ್ಕಳಿಗೆ ಕೋವಿಡ್ ಲಸಿಕೆ

ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ 15 ರಿಂದ 18 ವರ್ಷ ತುಂಬಿದ ಮಕ್ಕಳಿಗೆ ಕೋವಿಡ್‌ ಲಸಿಕೆ ಅಭಿಯಾನ ಆರಂಭವಾಗಲಿದೆ. ಆರೋಗ್ಯ ಇಲಾಖೆ ಸಕಲ ತಯಾರಿಗಳನ್ನು ನಡೆಸಿದೆ.

ರಾಜ್ಯದಲ್ಲಿ ಈ ವಯೋಮಾನದ 31.75 ಲಕ್ಷ ಮಕ್ಕಳಿದ್ದಾರೆ. ನಾಲ್ಕು ಸಾವಿರಕ್ಕಿಂತ ಹೆಚ್ಚು ಕೇಂದ್ರಗಳಲ್ಲಿಇಂದಿನಿಂದ ಲಸಿಕೆ ಅಭಿಯಾನ ನಡೆಯಲಿದೆ.

ಮಕ್ಕಳಿಗೆ ಸದ್ಯ ಕೋವ್ಯಾಕ್ಸಿನ್‌ ಲಸಿಕೆಯನ್ನು ಮಾತ್ರ ನೀಡಲು ಸರ್ಕಾರ ನಿರ್ಧರಿಸಿದೆ. 2007 ಕ್ಕಿಂತ ಮುಂಚೆ ಜನಿಸಿದ ಮಕ್ಕಳೆಲ್ಲರೂ ಈಗ ಲಸಿಕೆ ಪಡೆಯಬಹುದಾಗಿದೆ. ಕೋವಿಡ್‌ ಲಸಿಕೆ ಪಡೆದ ಮಕ್ಕಳಿಗೆ, ಮರುದಿನ ಶಾಲೆಗೆ ರಜೆ ನೀಡಲು ಸರ್ಕಾರ ತೀರ್ಮಾನಿಸಿದೆ.

ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರು ಸೋಮವಾರ ಬೆಳಗ್ಗೆ 9.30ಕ್ಕೆ ಮೂಡಲಪಾಳ್ಯದ ಭೈರವೇಶ್ವರ ನಗರದ ಬಿಬಿಎಂಪಿ ಶಾಲೆ ಮತ್ತು ಪದವಿ ಪೂರ್ವ ಸ್ನಾತಕೋತ್ತರ ಕಾಲೇಜಿನಲ್ಲಿ ಈ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

 

Share Post