ಬಿಜೆಪಿಯವರಿಗೆ ರಾಜಕಾರಣ ಮುಖ್ಯ ಅದಕ್ಕೇ ನಮಗೆ ತೊಂದರೆ ಕೊಡುತ್ತಿದ್ದಾರೆ-ಡಿಕೆಶಿ
ಬೆಂಗಳೂರು: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಲೆ ಬಿಜೆಪಿ ಸರ್ಕಾರವನನು ತರಾಟೆಗೆ ತೆಗೆದುಕೊಂಡಿದ್ದಾರೆ. ನಮ್ಮ ಪಾದಯಾತ್ರೆ ಬೆಂಗಳೂರು ಪ್ರವೇಶಿಸುವ ಮುನ್ನವೇ ಬ್ಯಾನರ್ಗಳನ್ನು ಕಿತ್ತು ಕಾಕಿದ್ದಾರೆ. ಬಿಜೆಪಿ ನಾಯಕರ ಬರ್ತಡೇ ಬ್ಯಾನರ್ ಇರಬಹುದು, ಜನರಿಗಾಗಿ ನಾವು ಮಾಡ್ತಿರುವ ಒಳ್ಳೆಯ ಕೆಲಸಕ್ಕೆ ಬ್ಯಾನರ್ ಬೇಡವಾ..? ಕಾನೂನು ಎಲ್ಲರಿಗೂ ಒಂದೇ. ಒಬ್ಬರಿಗೆ ಒಂದು, ಮತ್ತೊಬ್ಬರಿಗೊಂದು ಕಾನೂನು ಮಾಡಲು ಸಾಧ್ಯವಿಲ್ಲ. ಎಂದು ಕಿಡಿಕಾರಿದ್ರು.
ಮುಖ್ಯಮಂತ್ರಿಗಳು ಬಜೆಟ್ ಮಂಡನೆ ಮಾಡಲು ಸಹಕಾರ ನೀಡಬೇಕು ಎಂದ ಹೇಳಿದ ಕಾರಣ ಐದು ದಿನಗಳ ಪಾದಯಾತ್ರೆಯನ್ನು, 3 ದಿನಗಳಿಗೆ ಇಳಿಸಿದ್ದೇವೆ. ಮಾರ್ಚ್ 3ರಂದು ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬಹಿರಂಗ ಸಭೆ ನಡೆಯಲಿದ್ದು ಇದರಲ್ಲಿ ಭಾಗವಹಿಸುವ ಎಲ್ಲ ಕಾರ್ಯಕರ್ತರು ಮೆಟ್ರೋ ಮೂಲಕ ಆಗಮಿಸಿ, ಮೆಟ್ರೋ ಮೂಲಕ ತೆರಳಬೇಕು ಎಂದು ಮನವಿ ಮಾಡುತ್ತೇನೆ.
ಕಾಂಗ್ರೆಸ್ ಹೋರಾಟದಿಂದ ಸುಪ್ರೀಂಕೋರ್ಟ್ನಲ್ಲಿ ರಾಜ್ಯಕ್ಕೆ ಹಿನ್ನಡೆ ಯಾಗಲಿದೆ ಎಂಬ ಗೋವಿಂದ ಕಾರಜೋಳ ಮಾತಿಗೆ ‘ಕುಡಿಯುವ ನೀರಿನ ಯೋಜನೆಗೆ ಯಾವುದೇ ಅಡ್ಡಿ ಇಲ್ಲ ಎಂದು ಮುಖ್ಯಮಂತ್ರಿಗಳೇ ಹೇಳಿದ್ದಾರೆ. ನಾನು ಜಲಸಂಪನ್ಮೂಲ ಸಚಿವನಾಗಿದ್ದೆ, ನನಗೂ ಅಲ್ಪ ಸ್ವಲ್ಪ ಪರಿಜ್ಞಾನ ಇದೆ. ಗೋವಿಂದ ಕಾರಜೋಳ ಅವರು ತಮ್ಮ ಅಧಿಕಾರಿಗಳನ್ನು ಕರೆದುಕೊಂಡು ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಿ. ಅವರಿಗೆ ಹೋರಾಟ ಮಾಡಿ ಗೊತ್ತಿಲ್ಲ. ಅಡ್ವಾಣಿ ಅವರು ರಥಯಾತ್ರೆ ಮಾಡಿದ್ದು ಬಿಟ್ಟರೆ ಅವರು ಬೇರೆ ಹೋರಾಟ ಮಾಡಿಲ್ಲ. ಆದರೆ ನಮಗೆ ಮಹಾತ್ಮಾ ಗಾಂಧೀಜಿ ಅವರು ಅಹಿಂಸಾ ಮಾರ್ಗದ ಹೋರಾಟ ಹೇಳಿಕೊಟ್ಟಿದ್ದು ಅದು ನಮ್ಮ ರಕ್ತದ ಕಣಗಳಲ್ಲೇ ಬಂದಿದೆ’ ಎಂದು ತಿರುಗೇಟು ನೀಡಿದರು.
‘ಬಿಜೆಪಿಯವರಿಗೆ ರಾಜಕಾರಣ ಮುಖ್ಯ. ನಮ್ಮ ಹೋರಾಟ ನಿಲ್ಲಿಸಲು ಈ ರೀತಿ ಮಾಡುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಅಧಿಸೂಚನೆ ನಾವು ರಾಜಕೀಯ ಸಮಾವೇಶ ಮಾಡುವಂತಿಲ್ಲ ಎಂದು ಕೊಟ್ಟಿದ್ದಾರೆ. ಅವರು ಶಿವಮೊಗ್ಗದಲ್ಲಿ ಮೆರವಣಿಗೆ ಮಾಡಲಿಲ್ಲವೇ? ಭಜರಂಗದಳದವರು ಹಾಗೂ ಬಿಜೆಪಿಯವರು ಟೌನ್ ಹಾಲ್ ಬಳಿ ಯಾಕೆ ಸಮಾವೇಶ ಮಾಡಿದರು?
ಇಂದು ಬೊಮ್ಮನಹಳ್ಳಿಯಲ್ಲಿ ಕ್ರೀಡಾಂಗಣ ಉದ್ಘಾಟನೆ ಮಾಡುತ್ತಿರುವುದೇಕೆ? ನಮಗೆ ಮಾತ್ರ ಈ ನಿರ್ಬಂಧ ಯಾಕೆ? ಈ ಕೇಸ್, ಜೈಲಿಗೆಲ್ಲ ನಾವು ಹೆದರುವುದಿಲ್ಲ. ರಾಜ್ಯದಲ್ಲಿ ಅವರು ಏನೆಲ್ಲಾ ಮಾಡಿದ್ದಾರೆ ಎಂದು ಕಾರ್ಯಕರ್ತರಿಂದ ಪಟ್ಟಿ ತರಿಸಿ ಅವರ ಮುಂದೆ ಇಡುತ್ತೇನೆ. ಈ ವಿಚಾರವಾಗಿಯೇ ಹೋರಾಟ ಮಾಡುತ್ತೇವೆ. ಪೊಲೀಸ್ ಅಧಿಕಾರಿಗಳು ಸಮವಸ್ತ್ರ ತೆಗೆದು ಬಿಜೆಪಿಯವರ ಬಟ್ಟೆ ತೊಟ್ಟುಕೊಳ್ಳಲಿ. ಪೊಲೀಸ್ ಅಧಿಕಾರಿಗಳು ಒಂದು ವಿಚಾರ ಗಮನದಲ್ಲಿಟ್ಟುಕೊಳ್ಳಲಿ, ಸೂರ್ಯ ಹುಟ್ಟುತ್ತಾನೆ ಮುಳುಗುತ್ತಾನೆ, ಇವರುಗಳು ಯಾರೂ ಶಾಶ್ವತವಾಗಿ ಇರುವುದಿಲ್ಲ. ನಮಗೆ ತೊಂದರೆ ನೀಡುತ್ತಿರುವ ಪೋಲೀಸರ ಪಟ್ಟಿ ನಮ್ಮ ಬಳಿ ಇದೆ. ಸಮಯ ಬಂದಾಗ ಉತ್ತರ ನೀಡುತ್ತೇನೆ. ನಮಗೆ ತೊಂದರೆ ನೀಡಬೇಕು ಅಂತಲೇ ಕೇಸ್ ದಾಖಲಿಸುತ್ತಿದ್ದಾರೆ. ಪಾದಯಾತ್ರೆಯಲ್ಲಿ ಕೇವಲ 40 ಜನ ಮಾತ್ರ ಭಾಗವಹಿಸಿದ್ದೇವೆಯೇ? ಭಾಗವಹಿಸಿರುವ ಎಲ್ಲ 10 ಸಾವಿರ ಜನರ ಪಟ್ಟಿ ನೀಡುತ್ತೇವೆ ಕೇಸ್ ದಾಖಲಿಸಲಿ’ ಎಂದು ಎಚ್ಚರಿಸಿದರು.
ಬೆಂಗಳೂರಿನಲ್ಲಿ ಪೊಲೀಸ್ ಸರ್ಪಗಾವಲು ನಿಯೋಜನೆ ವಿಚಾರವಾಗಿ ಮಾತನಾಡಿದ ಡಿಕೆಶಿ ‘ಬಿಜೆಪಿಯವರು ಪೊಲೀಸ್ ಅವರನ್ನಾದರೂ ನಿಯೋಜಿಸಲಿ, ಕಾರ್ಯಕರ್ತರನ್ನಾದರೂ ನಿಯೋಜಿಸಲಿ. ನಾವು ಶಾಂತಿ ಪ್ರಿಯರು, ನೀರಿಗಾಗಿ ಹೆಜ್ಜೆ ಹಾಕುತ್ತಿದ್ದು. ಅವರ ಕರ್ತವ್ಯ ಅವರು ಮಾಡಲಿ ನಮ್ಮ ಅಭ್ಯಂತರವಿಲ್ಲ’ ಎಂದರು.