ಬ್ರಾಂಡ್ ಬೆಂಗಳೂರು ಮಾಡಲು ಡಿಸಿಎಂ ಪಣ; ಡಿಕೆಶಿ ವರ್ಚುಯಲ್ ಮೀಟಿಂಗ್
ಬೆಂಗಳೂರು; ಬೆಂಗಳೂರನ್ನು ಬ್ರಾಂಡ್ ಬೆಂಗಳೂರು ಮಾಡಲು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಉಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪಣ ತೊಟ್ಟಿದ್ದಾರೆ. ಅದಕ್ಕಾಗಿ ನಿರಂತರವಾಗಿ ಅವರು ಸಭೆಗಳನ್ನು ನಡೆಸುತ್ತಿದ್ದಾರೆ. ಎಲ್ಲಾ ವಿಭಾಗದ ಜನರಿಂದ ಸಲಹೆ ಸೂಚನೆಗಳನ್ನು ಪಡೆಯುತ್ತಿದ್ದಾರೆ. ಅದೇ ಇಂದೂ ಕೂಡಾ ಅವರು ವರ್ಚುಯಲ್ ಸಭೆ ನಡೆಸಿದರು.
ಬೆಂಗಳೂರು ನಿವಾಸಿಗಳ ಕ್ಷೇಮಾಭಿವೃದ್ಧಿ ಹಾಗೂ ನಾಗರಿಕ ಸಂಘಗಳ ಪ್ರತಿನಿಧಿಗಳ ಜೊತೆ ಡಿ.ಕೆ.ಶಿವಕುಮಾರ್ ಸಂವಾದ ನಡೆಸಿದರು. ಬೆಂಗಳೂರಿನ ಸಮಸ್ಯೆಗಳನ್ನು ನಿವಾರಿಸುವುದು, ಬೆಂಗಳೂರನ್ನು ವಿಶ್ವಮಟ್ಟದಲ್ಲಿ ಗುರುತಿಸುವಂತೆ ಮಾಡುವುದಕ್ಕೆ ಏನೆಲ್ಲಾ ಮಾಡಬೇಕು ಎಂಬುದರ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಹಲವರು ಹಲವು ರೀತಿಯ ಸಲಹೆಗಳನ್ನು ನೀಡಿದ್ದು, ಜನರ ಸಲಹೆಗಳನ್ನು ಪರಿಗಣಿಸಿ ಸರ್ಕಾರ ಬೆಂಗಳೂರಿನ ಅಭಿವೃದ್ಧಿಗೆ ಕ್ರಮ ಕೈಗೊಂಡಿದೆ.
ಸಭೆಯಲ್ಲಿ ಬಿಡಿಎ ಅಧ್ಯಕ್ಷ ರಾಕೇಶ್ ಸಿಂಗ್, ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, ರಾಜೇಂದ್ರ ಚೋಳನ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್ ಮತ್ತಿತರರು ಭಾಗವಹಿಸಿದ್ದರು.