Bengaluru

ಡಿಸಿಎಂ ಡಿಕೆಶಿ ಸಿಟಿ ರೌಂಡ್ಸ್;‌ ನಗರ ಪ್ರದಕ್ಷಿಣೆ ನಂತರ ಅವರು ಹೇಳಿದ್ದೇನು..?

ಬೆಂಗಳೂರು; ಇಂದು ಅಧಿಕಾರಿಗಳಿಗೆ ಮಾಹಿತಿ ನೀಡದೆ ಇಂದಿರಾ ಕ್ಯಾಂಟೀನ್, ಘನತ್ಯಾಜ್ಯ ಸಂಸ್ಕರಣ ಘಟಕಗಳಿಗೆ ಭೇಟಿ ನೀಡಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಇಂದಿರಾ ಕ್ಯಾಂಟೀನ್ ನಲ್ಲಿನ ಕೆಲವು ವ್ಯವಸ್ಥೆಗಳನ್ನು ಗಮನಿಸಿದ್ದೇನೆ. ಇನ್ನು ಘನತ್ಯಾಜ್ಯ ಘಟಕಗಳಲ್ಲಿ ಪರಿಶೀಲನೆ ಮಾಡಿದ್ದು, ಅಲ್ಲಿನ ಕಾರ್ಯವೈಖರಿ ತೃಪ್ತಿದಾಯಕವಾಗಿಲ್ಲ ಎಂದರು.

ಮೊದಲು ಸರ್ಕಾರದ ಸಂಸ್ಥೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದೇನೆ. ನಂತರ ಕಸ ವಿಲೇವಾರಿ ಸ್ಥಳಕ್ಕೆ ಭೇಟಿ ನೀಡುತ್ತೇನೆ. ಈ ಎಲ್ಲಾ ಸಂಸ್ಥೆಗಳ ಕಾರ್ಯವೈಖರಿ ಸರಿಯಾದ ಹಳಿಗೆ ತರಬೇಕು. ಮೊದಲು ಆ ಕೆಲಸ ಮಾಡುತ್ತೇವೆ ಎಂದರು.

ಕಸದಿಂದ ಇಂಧನ ಉತ್ಪಾದನೆ ಮಾಡುವುದಾಗಿ ಹೇಳಿ ಜವಾಬ್ದಾರಿ ವಹಿಸಿಕೊಂಡವರು ಇಂಧನ ಉತ್ಪಾದನೆ ಮಾಡುತ್ತಿಲ್ಲ. ಇನ್ನು ಈ ಘಟಕಗಳ ಕಾರ್ಯವೈಖರಿ ಬಗ್ಗೆ ಜವಾಬ್ದಾರಿಯುತ ಅಧಿಕಾರಿಗಳು ಪರಿಶೀಲನೆ ಮಾಡುತ್ತಿಲ್ಲ. ಬೆಂಗಳೂರು ನಗರ ಸ್ವಚ್ಚವಾಗಿ ಇಡಬೇಕು. ಆದರೆ ರಸ್ತೆ ಮಧ್ಯದಲ್ಲಿ ಕಸದ ರಾಶಿ ಇರುವ ಬಗ್ಗೆ ಪರಿಶೀಲನೆ ಮಾಡಿದ್ದೇನೆ. ಈ ಬಗ್ಗೆ ಅಧಿಕಾರಿಗಳ ಪ್ರಶ್ನೆ ಮಾಡಿದ್ದೇನೆ. ಇದಕ್ಕೆ ಹೊಣೆಗಾರಿಕೆ ಯಾರು ಹೊರಬೇಕು ಎಂದು ಕೇಳಿದ್ದೇನೆ. ಈ ಮಧ್ಯೆ ಲಾರಿ ಮಾಲೀಕರ ಸಂಘದ ಜೊತೆ ಚರ್ಚೆ ಮಾಡುವಂತೆ ಆಯುಕ್ತರಿಗೆ ಸೂಚಿಸಿದ್ದೇನೆ ಎಂದರು.

ಕಸಗಳನ್ನು ತಂದು ರಸ್ತೆಗೆ ಸುರಿಯುತ್ತಿರುವ ವಾಹನಗಳ ಬಗ್ಗೆ ಗಮನಹರಿಸಬೇಕು. ತ್ಯಾಜ್ಯ ಸಂಸ್ಕರಣ ಘಟಕಗಳ ಲೆಕ್ಕಾಚಾರದಲ್ಲಿ ಏರುಪೇರುಗಳಿವೆ. ಅದೆಲ್ಲವನ್ನೂ ಸರಿಪಡಿಸುತ್ತೇವೆ. ಘಟಕಕ್ಕೆ ಬರುವ ಪ್ರತಿ ಕಸದ ವಾಹನಗಳ ವಿಡಿಯೋ ದಾಖಲೆ ಮಾಡಿಸಿದ್ದೇನೆ. ಎಲ್ಲವೂ ಲೆಕ್ಕ ಸರಿಯಾಗಿ ಹೊಂದಾಣಿಕೆಯಾಗುತ್ತದೆಯೇ ಎಂಬುದನ್ನು ನೋಡಬೇಕು. ಎಂದರು.

ಇದಕ್ಕೂ ಮುನ್ನ ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿದ್ದೆ. ಒಂದು ಕಡೆ 9 ಗಂಟೆಗೆ 200ಕ್ಕೂ ಹೆಚ್ಚು ಪ್ಲೇಟ್ ತಿಂಡಿ ಖಾಲಿ ಆಗಿತ್ತು. ಅಲ್ಲಿ ₹5ರ ಬದಲು ₹10 ರೂ. ಪಡೆಯಲಾಗಿದೆ. ಅಲ್ಲಿದ್ದ ಸಹಾಯವಾಣಿ ಸಂಖ್ಯೆ ದುರಸ್ಥಿಯಲ್ಲಿತ್ತು. ಆದಷ್ಟು ಬೇಗ ಈ ಲೋಪದೋಷ ಸರಿಪಡಿಸಲಾಗುವುದು. ಎಲ್ಲಾ ಹಂತದಲ್ಲೂ ರಿಪೇರಿ ಮಾಡಲಾಗುವುದು ಎಂದರು.

Share Post