BengaluruCrime

ಮನೆಯಲ್ಲಿ ಭೀಕರ ಸಿಲಿಂಡರ್‌ ಸ್ಫೋಟ; 8 ಮಂದಿ ಸ್ಥಿತಿ ಗಂಭೀರ!

ಬೆಂಗಳೂರು; ಬೆಂಗಳೂರಿನಲ್ಲಿ ಮುಂಜಾನೆಯೇ ದುರಂತವೊಂದು ನಡೆದುಹೋಗಿದೆ. ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್‌ ಸ್ಫೋಟಗೊಂಡಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಯಲಹಂಕದ ಎಲ್‌ಬಿಎಸ್‌ ನಲ್ಲಿನ ಮನೆಯಲ್ಲಿ ಈ ದುರ್ಘಟನೆ ನಡೆದಿದೆ.

ಅಫರ್ವಾಜ್, ಸಲ್ಮಾ, ಶಾಹಿದ್, ಫಸಿಯಾ, ಅಸ್ಮಾ ಸೇಇರ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಯಲಹಂಕದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಸ್ಫೋಟದ ತೀವ್ರತೆಗೆ ಮನೆಯ ಗೋಡೆಗಳು ಛಿದ್ರವಾಗಿವೆ. ಜೊತೆಗೆ ಅಕ್ಕಪಕ್ಕದ ನಾಲ್ಕು ಮನೆಗಳಿಗೆ ಹಾನಿಯಾಗಿದೆ. ಮನೆಯ ಕಿಟಕಿಗಳು, ಬಾಗಿಲುಗಳು ಪೀಸ್‌ ಪೀಸ್‌ ಆಗಿವೆ.

 

Share Post