BengaluruCrimePolitics

ಕಾಂಗ್ರೆಸ್‌ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ; ರಾಜೀವ್‌ ಚಂದ್ರಶೇಖರ್‌

ಬೆಂಗಳೂರು; ಬಿಜೆಪಿ ಭ್ರಷ್ಟಾಚಾರದ ರೇಟ್‌ ಕಾರ್ಡ್‌ ಎಂದು ಜಾಹಿರಾತು ಪ್ರಕಟಿಸಿದ್ದ ಕಾಂಗ್ರೆಸ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಕೇಂದ್ರ ಸಚಿವ ರಾಜೀವ್‌ ಚಂದ್ರಶೇಖರ್‌ ಟ್ವೀಟ್‌ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ರಾಜ್ಯ ಚುನಾವಣಾ ಆಯೋಗಕ್ಕೆ ನಾವು ದೂರು ಕೊಟ್ಟಿದ್ದೇನೆ. ಪುರಾವೆ ಒದಗಿಸುವಂತೆ ಆಯೋಗ ಸೂಚನೆ ನೀಡಿದೆ. ಆಯೋದ ನಿರ್ದೇಶನ ಪಾಲಿಸದ ಕಾಂಗ್ರೆಸ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇವೆ ಎಂದು ತಿಳಿಸಿದ್ದಾರೆ.
ಬಿಜೆಪಿ ದೂರಿನ ಹಿನ್ನೆಲೆಯಲ್ಲಿ ಮೇ. 7 ರಂದು ಸಂಜೆ 7 ಗಂಟೆಯೊಳಗೆ ಪುರಾವೆಗಳನ್ನು ಒದಗಿಸುವಂತೆ ಕಾಂಗ್ರೆಸ್‌ಗೆ ಚುನಾವಣಾ ಆಯೋಗ ಸೂಚನೆ ನೀಡಿತ್ತು. ದಾಖಲೆ ಒದಗಿಸಲು ಆಗದಿದ್ದರೆ, ಕ್ಷಮೆ ಕೋರುವಂತೆ ಚುನಾವಣಾ ಆಯೋಗ ಕಾಂಗ್ರೆಸ್‌ಗೆ ನೋಟಿಸ್‌ ಜಾರಿ ಮಾಡಿತ್ತು.
ಆದ್ರೆ ಮೇ 9 ಆದರೂ ಕಾಂಗ್ರೆಸ್‌ ಇದುವರೆಗೂ ಯಾವುದೇ ದಾಖಲೆಗಳನ್ನು ಒದಗಿಸಿಲ್ಲ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇವೆ ಎಂದು ರಾಜೀವ್‌ ಚಂದ್ರಶೇಖರ್‌ ಟ್ವೀಟ್‌ ಮಾಡಿದ್ದಾರೆ.

Share Post