BengaluruDistrictsPolitics

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹ

ಬೆಂಗಳೂರು; ಬಾಗೇಪಲ್ಲಿ ಶಾಸಕ ಎಸ್‌.ಎನ್‌.ಸುಬ್ಬಾರೆಡ್ಡಿಯವರಿಗೆ ಈ ಬಾರಿ ಮಂತ್ರಿಮಂಡಲದಲ್ಲಿ ಅವಕಾಶ ನೀಡಬೇಕೆಂದು ಬಾಗೇಪಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಎಸ್‌.ನರೇಂದ್ರ ಆಗ್ರಹ ಮಾಡಿದ್ದಾರೆ. ಈ ಬಗ್ಗೆ ಜಂಟಿ ಸುದ್ದಿಗೋಷ್ಠಿ ನಡೆಸಿರುವ ನರೇಂದ್ರ, ಸುಬ್ಬಾರೆಡ್ಡಿಯವರು ಹ್ಯಾಟ್ರಿಕ್‌ ಗೆಲುವು ಸಾಧಿಸಿದ್ದಾರೆ. ಹೀಗಾಗಿ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅತ್ಯಂತ ಹಿಂದುಳಿದ ಕ್ಷೇತ್ರ ಬಾಗೇಪಲ್ಲಿ ಕ್ಷೇತ್ರ. ಈ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯಾಗಬೇಕಾದರೆ ಸುಬ್ಬಾರೆಡ್ಡಿಯವರಿಗೆ ಸಚಿವ ಸ್ಥಾನ ನೀಡಬೇಕೆಂದು ನರೇಂದ್ರ ಒತ್ತಾಯ ಮಾಡಿದರು.

ಇನ್ನು ಒಂದು ವರ್ಷದಲ್ಲಿ ಲೋಕಸಭಾ ಚುನಾವಣೆ ಇದೆ. ಲೋಕಸಭಾ ಚುನಾವಣೆಯಲ್ಲಿ ಪ್ರತಿಬಾರಿಯೂ ಬಾಗೇಪಲ್ಲಿ ಕ್ಷೇತ್ರದ ಜನ ಕಾಂಗ್ರೆಸ್‌ಗೆ ಹೆಚ್ಚಿನ ಮತಗಳನ್ನು ನೀಡುತ್ತಾ ಬಂದಿದ್ದಾರೆ. ಹೀಗಾಗಿ ಸುಬ್ಬಾರೆಡ್ಡಿಯವರಿಗೆ ಸಚಿವ ಸ್ಥಾನ ನೀಡುವುದರಿಂದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸುಲಭವಾಗಿ ಗೆಲ್ಲಲು ಅನುಕೂಲವಾಗುತ್ತದೆ. ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸುಬ್ಬಾರೆಡ್ಡಿ ಹಿರಿಯ ಹಾಗೂ ಅನುಭವಿ ಶಾಸಕರಾಗಿದ್ದಾರೆ. ಅವರಿಗೆ ಈ ಬಾರಿ ಸಚಿವಗಿರಿ ನೀಡಲೇಬೇಕು ಎಂದು ನರೇಂದ್ರ ಆಗ್ರಹ ಮಾಡಿದ್ದಾರೆ.

Share Post