ಬೆಂಗಳೂರಲ್ಲಿ ಜಾಸ್ತಿಯಾಗ್ತಿವೆ ಡೆಂಘಿ ಪ್ರಕರಣಗಳು; 11 ದಿನದಲ್ಲಿ 178 ಪ್ರಕರಣ
ಬೆಂಗಳೂರು; ಮಳೆಗಾಲ ಶುರುವಾಗುತ್ತಿದ್ದಂತೆ ಕಾಯಿಲೆಗಳು ಕೂಡಾ ಹೆಚ್ಚಾಗುತ್ತಿವೆ. ಅದ್ರಲ್ಲೂ ಕೂಡಾ ಬೆಂಗಳೂರಿನಲ್ಲಿ ಕಳೆದ ನಾಲ್ಕೈ ದಿನಗಳಿಂದ ಮಳೆ ಸುರಿಯುತ್ತಿದ್ದು, ಹಲವು ಕಾಯಿಲೆಗಳಿಗೆ ದಾರಿ ಮಾಡಿಕೊಟ್ಟಿದೆ.
ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಡೆಂಘಿ ಪ್ರಕರಣ ಹೆಚ್ಚಾಗುತ್ತಿವೆ. ತೀವ್ರ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ಪರೀಕ್ಷೆ ವೇಳೆ ಡೆಂಘಿ ಎಂದು ಗೊತ್ತಾಗಿದೆ. ಕಳೆದ 11 ದಿನಗಳಲ್ಲಿ ಬೆಂಗಳೂರಿನಲ್ಲಿ 178 ಮಂದಿಗೆ ಡೆಂಘಿ ಇರುವುದು ಪತ್ತೆಯಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಇದುವರೆಗೆ 3575 ಮಂದಿಗೆ ಡೆಂಘಿ ಇರಬಹುದು ಎಂದು ಶಂಕಿಸಲಾಗಿದೆ. ಇದರ ಪೈಕಿ 1009 ಜನರ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಇದ್ರಿಂದ 178 ಮಂದಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ಈವರೆಗೆ 919 ಡೆಂಘಿ ಪ್ರಕರಣಗಳು ಪತ್ತೆಯಾಗಿವೆ. ಅದ್ರಲ್ಲೂ ಕಳೆದ 11 ದಿನದಲ್ಲಿ ಈ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ.