Bengaluru

ಉಪ ಲೋಕಾಯುಕ್ತರಾಗಿ ಕೆ.ಎನ್‌.ಫಣೀಂದ್ರ ಪ್ರಮಾಣವಚನ

ಬೆಂಗಳೂರು: ಉಪ‌ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಕೆ ಎನ್ ಫಣಿಂದ್ರ  ಅಧಿಕಾರ ಸ್ವೀಕರಿಸಿದರು. ರಾಜಭವನದಲ್ಲಿ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್  ಅವರು, ಫಣೀಂದ್ರ ಅವರಿಗೆ ಪ್ರಮಾನವಚನ ಬೋಧಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ಉಪ ಸಭಾಪತಿ ಆನಂದ್ ಮಾಮನಿ, ಗೃಹ ಸಚಿವ ಅರಗ ಜ್ಞಾನೆಂದ್ರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಶಾಸಕ ಸುರೇಶ್ ಕುಮಾರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮತ್ತು ಇತರರು ಉಪಸ್ಥಿತರಿದ್ದರು.

Share Post