BengaluruPolitics

ದೇವೇಗೌಡ, ಬೊಮ್ಮಾಯಿ ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ

ಬೆಂಗಳೂರು; ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮೇಲೆ ಬಿ.ವೈ.ವಿಜಯೇಂದ್ರ ಅವರು ಬಿರುಸಿನ ಸಂಚಾರ ನಡೆಸುತ್ತಿದ್ದಾರೆ. ಕಾರ್ಯಕರ್ತರು, ನಾಯಕರನ್ನು ಭೇಟಿಯಾಗುತ್ತಿದ್ದಾರೆ. ಇಂದು ಬೆಳಗ್ಗೆ ವಿಜಯೇಂದ್ರ ಅವರು ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಅನಂತರ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿದ್ದಾರೆ.

ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಆಗಮಿಸಿದ ವಿಜಯೇಂದ್ರ ಅವರನ್ನು ಜೆಡಿಎಸ್‌ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು.  ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಕೂಡಾ ಈ ವೇಳೆ ಹಾಜರಿದ್ದರು. ದೇವೇಗೌಡರ ಆಶೀರ್ವಾದ ಪಡೆದ ವಿಜಯೇಂದ್ರ, ಗೌಡರ ಜೊತೆ ಕೆಲಹೊತ್ತು ಸಮಾಲೋಚನೆ ನಡೆಸಿದರು.

ಮುಂಬರು ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡಿವೆ. ಈ ಹಿನ್ನೆಲೆಯಲ್ಲಿ ಉಭಯ ನಾಯಕರ ಈ ಭೇಟಿಗೆ ಮಹತ್ವ ಬಂದಿದೆ.

 

Share Post