ಸರ್ಕಾರದ ಅನುಮತಿ ಇಲ್ಲದೆ ಟೋಲ್ ಹೆಚ್ಚಳ; ನೈಸ್ ವಿರುದ್ಧ ಗೌಡರ ಗುಡುಗು
ಬೆಂಗಳೂರು: ನೈಸ್ ಸಂಸ್ಥೆ ಟೋಲ್ ಶುಲ್ಕವನ್ನು ಸರ್ಕಾರದ ಅನುಮತಿ ಇಲ್ಲದೆ ಹೆಚ್ಚಳ ಮಾಡಿದೆ. ನೈಸ್ ಸಂಸ್ಥೆಯು ಸರ್ಕಾರದ ಎಲ್ಲಾ ನಿಯಮಗಳನ್ನೂ ಗಾಳಿಗೆ ತೂರಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನೈಸ್ ಸಂಸ್ಥೆಗೆ ಕೊಮ್ಮನಘಟ್ಟದ ಬಳಿ ನೀಡಿರೋ 41 ಎಕರೆ ಜಾಗದ ಸೇಲ್ ಡೀಡ್ ರದ್ದುಗೊಳಿಸುವಂತೆ ಪತ್ರ ಬರೆದಿದ್ದಿನಿ. ವಿಧಾನ ಪರಿಷತ್ ನಲ್ಲಿ ಈ ವಿಷಯ ಚರ್ಚೆ ಆಯ್ತು.
ಆದ್ರೆ ಯಾವುದೇ ಸಚಿವರು ಸರಿಯಾಗಿ ಉತ್ತರ ಕೊಟ್ಟಿಲ್ಲ. ನಾನು ಅನೇಕ ಪತ್ರಗಳನ್ನು ಸಿಎಂ ಅವರಿಗೆ ಮತ್ತು ಸಿಎಸ್ ಅವರಿಗೆ, ಕೈಗಾರಿಕೆ ಇಲಾಖೆ ಕಾರ್ಯದರ್ಶಿಗೂ ಬರೆದಿದ್ದೇನೆ. ಆದ್ರೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.