ಬಾಸಿಸಂ ಬಿಡಿ, ಜನರೊಂದಿಗೆ ಬೆರೆತು ಕೆಲಸ ಮಾಡಿ; ಡಿಸಿಗಳಿಗೆ ಸಿಎಂ ಖಡಕ್ ಸೂಚನೆ
ಬೆಂಗಳೂರು: ಜಿಲ್ಲಾಧಿಕಾರಿಗಳು ತಮ್ಮ ಜಿಲ್ಲೆಗಳಲ್ಲಿ ಬಾಸಿಸಂ ಮಾಡಬಾರದು. ಬದಲಾಗಿ ಜನರೊಂದಿಗೆ ಬೆರೆತು ಕೆಲಸ ಮಾಡಬೇಕು. ಜಿಲ್ಲೆಯಲ್ಲಿ ನೀವೇ ಬಾಸ್ ಎಂಬ ಭಾವನೆಯಿಂದ ಹೊರಬರಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಖಡಕ್ ಸೂಚನೆ ಕೊಟ್ಟಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಎಲ್ಲಾ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಈ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಆಡಳಿತದ ಪಾಠ ಮಾಡಿದ ಸಿಎಂ, ನೀವು ಜಿಲ್ಲಾ ಮ್ಯಾಜಿಸ್ಟ್ರೇಟ್ ಅನ್ಕೊಂಡು, ಜನರೊಂದಿಗೂ ಅದೇ ರೀತಿಯ ವರ್ತನೆ ಮಾಡಬೇಡಿ. ಜಿಲ್ಲಾಧಿಕಾರಿಗಳು ಕೂಡಾ ಜನಸೇವೆ ಮಾಡುವ ಸೇವಕರು. ಜಿಲ್ಲೆಗಳಲ್ಲಿ ನಾವೇ ಬಾಸ್ ಎಂಬ ಮನೋಭಾವ ಬಿಟ್ಟು ಕೆಲಸ ಮಾಡಿದಾಗ ಮಾತ್ರ ಜನರ ಪ್ರೀತಿ ಗಳಿಸಲು ಸಾಧ್ಯ ಎಂದು ಹೇಳಿದರು.