BengaluruPolitics

ಡಿಕೆಶಿ ಬೆಂಗಳೂರು ಸಿಟಿ ರೌಂಡ್ಸ್‌; ಮಳೆಗಾಲ ಎದುರಿಸಲು ಸಜ್ಜು

ಬೆಂಗಳೂರು; ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬೆಂಗಳೂರು ನಗರದ ಬಗ್ಗೆ ಹೆಚ್ಚು ಕಾಳಜಿ ವಹಿಸಿದ್ದಾರೆ. ಮಳೆಗಾಲ ಶುರುವಾಗುತ್ತಿದ್ದು, ಮಳೆಯಿಂದಾಗಿ ಬೆಂಗಳೂರಿನಲ್ಲಿ ಅನಾಹುತಗಳು ಹೆಚ್ಚಾಗುತ್ತವೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಸಂಕಷ್ಟ ಅನುಭವಿಸುತ್ತಾರೆ. ಹೀಗಾಗಿ ಈ ಬಾರಿ ಅಂತಹ ಅನಾಹುತಗಳು ಆಗದಂತೆ ತಡೆಯಲು ಡಿಸಿಎಂ ಡಿ.ಕೆ.ಶಿವಕುಮಾರ್‌ ಶ್ರಮಿಸುತ್ತಿದ್ದಾರೆ.

ಈಗಾಗಲೇ ಹಲವು ಅಧಿಕಾರಿಗಳ ಜೊತೆ ಡಿ.ಕೆ.ಶಿವಕುಮಾರ್‌ ಚರ್ಚೆ ನಡೆಸಿದ್ದಾರೆ. ಇಂದು ಅವರು ಬಿಡಿಎ ಅಧಿಕಾರಿಗಳು ಮೀಟಿಂಗ್‌ ನಡೆಸಿದರು. ಬೆಂಗಳೂರು ಅಭಿವೃದ್ಧಿಗಾಗಿ ಸಮನ್ವಯತೆ ಮೂಡಿಸಲು ಈ ಸಭೆ ನಡೆಸಲಾಗಿದ್ದು, ಇದರಲ್ಲಿ ಬಿಎಂಆರ್​ಸಿಎಲ್, ಬಿಡಿಎ, ಬಿಬಿಎಂಪಿ ಅಧಿಕಾರಿಗಳು ಭಾಗಿಯಾಗಿದ್ದರು. ಅನಂತರ ಅವರು, ನಗರ ಪ್ರದಕ್ಷಿಣೆ ಹಾಕುತ್ತಿದ್ದಾರೆ.

ಯಮಲೂರು, ದೊಮ್ಮಲೂರು, ಬೆಳ್ಳಂದೂರು, ಸರ್ಜಾಪುರಕ್ಕೆ ಡಿ.ಕೆ.ಶಿವಕುಮಾರ್‌ ಭೇಟಿ ನೀಡಲಿದ್ದಾರೆ. ರಾಜಕಾಲುವೆ ಒತ್ತುವರಿಯಾದ ಸ್ಥಳಗಳಿಗೆ ಭೇಟಿ ನೀಡಿ ಅಧಿಕಾರಿಗಳು ಜೊತೆ ಅವರು ಚರ್ಚೆ ನಡೆಸಲಿದ್ದಾರೆ.  ಸುಮಾರು ಏಳರಿಂದ ಎಂಟು ರಾಜ ಕಾಲುವೆಗಳನ್ನು ಡಿ.ಕೆ.ಶಿವಕುಮಾರ್ ಪರಿಶೀಲನೆ‌ ಮಾಡಲಿದ್ದಾರೆ.

Share Post