BengaluruPolitics

DK Shivakumar; ಬೆಂಗಳೂರಿನ ನೀರಿನ ಸಮಸ್ಯೆ ನೀಗಿಸಲು ಕ್ರಮ; ಡಿಕೆಶಿ

ಬೆಂಗಳೂರು; ಬೆಂಗಳೂರು ನಿಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರು ಸರಬರಾಜು ಮಾಡಲು ಕಾವೇರಿ ಮೂಲದಿಂದ ಬೆಂಗಳೂರು ನಗರಕ್ಕೆ ಪ್ರತಿ ದಿನ 1450 ದಶಲಕ್ಷ ಲೀಟರ್ ನೀರು ಸರಬರಾಜು ಮಾಡಲಾಗುತ್ತಿದ್ದು, ಬೆಂಗಳೂರು ನಗರದ ಹಳೆಯ ಪ್ರದೇಶಗಳಲ್ಲಿ (ಕೋರ್ ಏರಿಯಾ) ಹಾಗೂ ಹಳೆಯ 7 ನಗರಸಭೆ ಮತ್ತು 1 ಪುರಸಭೆ ಪ್ರದೇಶಗಳಿಗೆ ಪರ್ಯಾಯ ದಿನಗಳಲ್ಲಿ ಕಾವೇರಿ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ 110 ಹಳ್ಳಿಗಳ ಪೈಕಿ ಕಾವೇರಿ ಕುಡಿಯುವ ನೀರಿನ ಲಭ್ಯತೆ ಖಾತರಿಪಡಿಸಿಕೊಂಡು 51 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ;

ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ಶಾಸಕ ರಾದ ಬಸವರಾಜ ಬಿ.ಎ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ಜಲಮಂಡಳಿಯ ಸುಪದ‍್ಯಲ್ಲಿರುವ ಸುಮಾರು 10,789 ಕೊಳವೆಬಾವಿಗಳನ್ನು ಸುಸ್ಥಿತಿಯಲ್ಲಿಟ್ಟು, ಇದರ ಮೂಲಕ ನಗರದ ಜನರಿಗೆ ನೀರು ಸರಬರಾಜು ಮಾಡಲು ಹಾಗೂ ಬೇಸಿಗೆಯಲ್ಲಿ ಈ ಕೊಳವೆಬಾವಿಗಳ ನಿರ್ವಹಣೆಗಾಗಿ ಬೇಕಾಗುವ ಸಾಮಗ್ರಿಗಳನ್ನು ಕೇಂದ್ರ ಉಗ್ರಾಣದಲ್ಲಿ ಈಗಾಗಲೇ ಶೇಖರಿಸಲಾಗಿದೆ. ಅಲ್ಲದೇ ಕಡಿಮೆ ಇಳುವರಿ ಇರುವ ಕೊಳವೆ ಬಾವಿಗಳನ್ನು ಗುರುತಿಸಿ, ಅವುಗಳನ್ನು ಮರು ಡ್ರಿಲ್ಲಿಂಗ್ ಮಾಡಿ ನೀರಿನ ಇಳುವರಿಯನ್ನು ಹೆಚ್ಚಿಸಲು ಕ್ರಮ ವಹಿಸಕಾಗುತ್ತಿದೆ. ಹೆಚ್ಚಿನ ನೀರಿನ ಬವಣೆ ಇರುವ ಪ್ರದೇಶಗಳಲ್ಲಿ ಹೊಸ ಕೊಳವೆ ಬಾವಿಗಳನ್ನು ಕೊರೆಯಲು ಉದ್ದೇಶಿಸಲಾಗಿದೆ ಹಾಗೂ ಬೆಂಗಳೂರು ಜಲಮಂಡಳಿಯ ಒಟ್ಟು 68 ನೀರಿನ ಟ್ಯಾಂಕರ್ ಗಳನ್ನು ಸುಸ್ಥಿತಿಯಲ್ಲಿಟ್ಟು, ನೀರನ್ನು ಸರಬರಾಜು ಮಾಡುವುದಲ್ಲದೇ, ಜಲಮಂಡಳಿಯ ವಾಟರ್ ಟ್ಯಾಂಕರ್ ಗಳನ್ನು ಹೊರತುಪಡಿಸಿ ಹೆಚ್ಚುವರಿಯಾಗಿ ಖಾಸಗಿ ನೀರಿನ ಟ್ಯಾಂಕರ್ ಗಳ ಮೂಲಕ ನೀರನ್ನು ಸರಬರಾಜು ಮಾಡಲು ಉದ್ದೇಶಿಸಿಸಲಾಗಿದೆ ಎಂದು ಹೇಳಿದರು.

ಬೇಸಿಗೆಯಲ್ಲಿ ಸಮಸ್ಯೆ ಬರದಂತೆ ಎಚ್ಚರಿಕೆ;

ಬೆಂಗಳೂರು ನಗರಕ್ಕೆ ಹಂಚಿಕೆಯಾಗಿರುವ ಕಾವೇರಿ ನೀರನ್ನು ಬೇಸಿಗೆಯಲ್ಲಿ ಫೆಬ್ರವರಿ-2024 ರಿಂದ ಜುಲೈ 2024ರವರೆಗೆ ಒಟ್ಟು 11.24 ಟಿ.ಎಂ.ಸಿ ನೀರನ್ನು ಜಲಾಶಯದಲ್ಲಿ ಶೇಖರಿಸಿ ಸರಬರಾಜು ಮಾಡಲು ಕಾವೇರಿ ನೀರಾವರಿ ನಿಗಮವನ್ನು ಕೋರಲಾಗಿದೆ. ವಾಟರ್ ಟ್ಯಾಂಕರ್ ಗಳ ಮುಖಾಂತರ ತುರ್ತು ನೀರು ಸರಬರಾಜು ಮಾಡಲಿ ಹೆಚ್ಚುವರಿ ನೀರಿನ ಫಿಲ್ಲಿಂಗ್ ಪಾಯಿಂಟ್ ಗಳನ್ನು ನಿರ್ಮಿಸಲು ಕ್ರಮ ವಹಿಸಲಾಗುತ್ತಿದೆ. ಹಾಲಿ ದುರಸ್ಥಿಯಲ್ಲಿರುವ ವಿದ್ಯುತ್ ಚಾಲಿತ ಕೊಳವೆ ಬಾವಿಗಳನ್ನು ತುರ್ತಾಗಿ ದುರಸ್ಥಿ ಪಡಿಸಿ, ಅವುಗಳಿಂದ ಸಾರ್ವಜನಿಕರಿಗೆ ನೀರು ಸರಬರಾಜು ಮಾಡಲು ಕ್ರಮಕೈಗೊಳ್ಳಲಾಗಿದೆ. ಹೊಸದಾಗಿ ಸೇರ್ಪಡೆಗೊಂಡಿರುವ 110 ಹಳ್ಳಿಗಳಲ್ಲಿ ಬಿಟ್ಟುಹೋಗಿರುವ ಪ್ರದೇಶಗಳಲ್ಲಿ ಪೂರ್ಣ ಪ್ರಮಾಣದಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಲಿ, ಸರ್ಕಾರವು 110 ಹಳ್ಳಿಗಳ 2ನೇ ಹಂತದ ಯೋಜನೆಯನ್ನು ತೆಗೆದುಕೊಳ್ಳಲು ಈಗಾಗಲೇ ಅನುಮೋದನೆ ನೀಡಲಾಗಿದ್ದು, ಈ ಯೋಜನೆಯಡಿ ಕಾಮಗಾರಿಯನ್ನು ಕೈಗೊಳ್ಳಲು ಟೆಂಡರ್ ಪ್ರಕ್ರಿಯೆ ಚಾಲ್ತಿಯಲ್ಲಿದ್ದು ಅತೀ ಜರೂರಾಗಿ ಹಂತ ಹಂತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ವಿಧಾನಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

Share Post