ಎಂ.ಬಿ.ಪಾಟೀಲ್ ವಿರುದ್ಧ ಸಿಡಿದೆದ್ದ ಡಿಕೆಶಿ; ಸರ್ಕಾರದಿಂದ ಹೊರಗಿರುತ್ತೇನೆ ಅಂದರಾ..?
ಬೆಂಗಳೂರು; ನಿನ್ನೆ ಮೈಸೂರಿನ ಸುತ್ತೂರಿನಲ್ಲಿ ಸಚಿವ ಎಂ.ಬಿ.ಪಾಟೀಲ್ ನೀಡಿದ ಹೇಳಿಕೆ ಕಾಂಗ್ರೆಸ್ ಸರ್ಕಾರದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಎಂ.ಬಿ.ಪಾಟೀಲ್ ಹೇಳಿಕೆಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೆಂಡಾಮಂಡಲರಾಗಿದ್ದಾರೆ ಎಂದು ತಿಳಿದುಬಂದಿದೆ. ಹೈಕಮಾಂಡ್‌ಗೆ ಎಂ.ಬಿ.ಪಾಟೀಲ್ ವಿರುದ್ಧ ದೂರು ಕೂಡಾ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಸುತ್ತೂರು ಮಠಕ್ಕೆ ಭೇಟಿ ನೀಡಿದ್ದ ಸಚಿವ ಎಂ.ಬಿ.ಪಾಟೀಲ್, ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಆಗಿರ್ತಾರೆ. ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಯಾವುದೇ ಮಾತುಕತೆ ಆಗಿಲ್ಲ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಡಿ.ಕೆ.ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗೇ ಆದರೆ ನಾನು ಸರ್ಕಾರದಿಂದಲೇ ಹೊರಗುಳಿಯುತ್ತೇನೆ ಎಂದು ಖಡಕ್ಕಾಗಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್, ರಣದೀಪ್ ಸುರ್ಜೇವಾಲಾಗೆ ಡಿ.ಕೆ.ಶಿವಕುಮಾರ್ ಕರೆ ಮಾಡಿ ಈ ಬಗ್ಗೆ ಮಾತನಾಡಿದ್ದಾರೆ ಎಂದು ಮೂಲಗಳಿಂದ ಗೊತ್ತಾಗಿದೆ. ಈ ರೀತಿ ಹೇಳಿಕೆ ನೀಡಲು ಎಂ.ಬಿ.ಪಾಟೀಲ್ ಯಾರು..?, ಅವರೇನು ಹೈಕಮಾಂಡ್ ನಾಯಕರೇ..? ಇಲ್ಲ ಕಾಂಗ್ರೆಸ್ ಅಧ್ಯಕ್ಷರೇ../ ಎಂದು ಖಾರವಾಗಿಯೇ ಪ್ರಶ್ನಿಸಿದ್ದಾರೆ ಎಂದು ತಿಳಿದುಬಂದಿದೆ.