ಹೋಟೆಲ್, ಬಾರ್, ರೆಸ್ಟೋರೆಂಟ್ ತೆರೆಯಲು ಅನುಮತಿ ನೀಡಿ; ಡಿ.ಕೆ.ಶಿವಕುಮಾರ್
ಬೆಂಗಳೂರು: ವೀಕೆಂಡ್ ಕರ್ಫೂ ವೇಳೆ ಶುಕ್ರವಾರದಿಂದ ಸೋಮವಾರದವರೆಗೆ ಬಾರ್, ಪಬ್, ಹೋಟೆಲ್, ರೆಸ್ಟೋರೆಂಟ್‌ಗಳನ್ನು ಮುಚ್ಚಲು ಆದೇಶ ನೀಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗಲಿದೆ. ವ್ಯಾಪಾರಿಗಳಿಗೆ ದೊಡ್ಡ ಮಟ್ಟದಲ್ಲಿ ನಷ್ಟವಾಗುತ್ತದೆ. ಈ ಹಿನ್ನೆಲೆ ಈ ಆದೇಶ ವನ್ನು ಹಿಂಪಡೆಯಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.
ಅಮೆರಿಕ ಸೇರಿದ ಹಲವು ದೇಶಗಳಲ್ಲಿ ಪ್ರತಿನಿತ್ಯ ಲಕ್ಷಾಂತರ ಕೇಸ್‌ಗಳು ದಾಖಲಾಗುತ್ತಿವೆ. ಆದರೂ ಅಲ್ಲಿ, ಈ ರೀತಿಯ ಜನವಿರೋಧ ನಿಯಮಗಳನ್ನು ಜಾರಿಗೆ ತಂದಿಲ್ಲ. ಹೊರಗಡೆಯಿಂದ ಬಂದವರು, ಕೆಲಸದ ಮೇಲೆ ಬಂದವರು ಹೋಟೆಲ್‌ಗಳಲ್ಲಿ ಕೊಠಡಿ ಬುಕ್ ಮಾಡಿರುತ್ತಾರೆ. ಅಂತಹವರು ಏನು ಮಾಡಬೇಕು..?, ವಿವಿಧ ಕೆಲಸದ ಮೇಲೆ ಬಂದಿರುವವರಿಗೆ ಊಟಕ್ಕೆ ಏನು ಮಾಡಬೇಕು ಎಂದು ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ವೀಕೆಂಡ್ ಕರ್ಫ್ಯೂ ವೇಳೆ ಹೋಟೆಲ್, ರೆಸ್ಟೋರೆಂಟ್, ಲಾಡ್ಜ್‌ಗಳಿಗೆ ಅನುಮತಿ ನೀಡಿದರೆ ಯಾವುದೇ ತೊಂದರೆಯಾಗದು. ಹೀಗಾಗಿ ಸರ್ಕಾರ ಈ ಆದೇಶವನ್ನು ಹಿಂಪಡೆಯಬೇಕು ಎಂದು ಡಿ.ಕೆ.ಶಿವಕುಮಾರ್ ಸಿಎಂಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.