ಈಶ್ವರಪ್ಪ ಸುಳ್ಳು ಕಂಪನಿಯ ಚೇರ್ಮನ್; ಡಿ.ಕೆ.ಶಿವಕುಮಾರ್
ಬೆಂಗಳೂರು: ಸಚಿವ ಈಶ್ವರಪ್ಪ ಅವರ ರಾಜೀನಾಮೆ ಪಡೆಯಬೇಕು ಹಾಗೂ ಅವರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಅಹೋರಾತ್ರಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಬೆನ್ನಲ್ಲೇ ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ದಾರ ಪ್ರಕಟಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತುರ್ತು ಸುದ್ದಿಗೋಷ್ಠಿ ನಡೆಸಿದರು. ಈಶ್ವರಪ್ಪ ಅವರು ನಾಳೆ ರಾಜೀನಾಮೆ ಕೊಡುವುದಾಗಿ ಹೇಳಿದ್ದಾರೆ. ಆದ್ರೆ ಈಶ್ವರಪ್ಪ ನುಡಿದಂತೆ ಯಾವತ್ತೂ ನಡೆಯುವುದಿಲ್ಲ ಎಂದರು.
ಈಶ್ವರಪ್ಪ ಬರೀ ಸುಳ್ಳು ಹೇಳುತ್ತಾರೆ. ಅವರು ಸುಳ್ಳು ಕಂಪನಿ ಚೇರ್ಮನ್ ಎಂದು ಲೇವಡಿ ಮಾಡಿದ ಡಿ.ಕೆ.ಶಿವಕುಮಾರ್, ನಾವು ರಾಜೀನಾಮೆ ಬಗ್ಗೆ ಮಾತನಾಡುತ್ತಿಲ್ಲ. ಭ್ರಷ್ಟಾಚಾರ ಸೆಕ್ಷನ್ ಅಡಿ ಅವರ ವಿರುದ್ಧ ಕೇಸ್ ದಾಖಲಿಸಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.